ganesha mahamandala ಹುಬ್ಬಳ್ಳಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶಾಸಕ ಪ್ರಸಾದ ಅಬ್ಬಯ್ಯ ಉದ್ಘಾಟಿಸಿದರು.
ಹುಬ್ಬಳ್ಳಿ: ಗಣೇಶೋತ್ಸವವು ಭಾವೈಕ್ಯತೆ ಮತ್ತು ಸಾಂಸ್ಕೃತಿಕ ganesha mahamandala ಅರಿವು ಮೂಡಿಸುತ್ತದೆ. ಎಲ್ಲ ಸಮುದಾಯದವರು ಕೂಡಿ ಆಚರಿಸುವ ಸಂಭ್ರಮದ ಹಬ್ಬವಾಗಿದೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಅಭಿಪ್ರಾಯಪಟ್ಟರು.
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗಳ ಮಹಾಮಂಡಳದ ವತಿಯಿಂದ ಇಲ್ಲಿಯ ಮೂರುಸಾವಿರ ಮಠದ ಸಭಾಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಾರಾಷ್ಟ್ರದ ನಂತರ ದೇಶದಲ್ಲೇ ಹುಬ್ಬಳ್ಳಿ ಗಣೇಶೋತ್ಸವ ತನ್ನದೇ ಆದ ಖ್ಯಾತಿ ಪಡೆದಿದೆ. ಲೋಕಮಾನ್ಯ ಬಾಲಗಂಗಾಧರ ತಿಲಕರು ಸ್ವಾತಂತ್ರ್ಯದ ಕಿಚ್ಚು ಹಚ್ಚಲು ಗಣೇಶೋತ್ಸವ ಆರಂಭಿಸಿದರು. ಈ ಸಂಪ್ರದಾಯವನ್ನು ಗಣೇಶೋತ್ಸವ ಸಮಿತಿಗಳ ಮಹಾಮಂಡಳ ಮುಂದುವರಿಸಿಕೊಂಡು ಹೊರಟಿರುವುದು ಶ್ಲಾಘನೀಯ ಎಂದರು.
ಸಮಾಜ ಸೇವಕ ರಮೇಶ ಮಹಾದೇವಪ್ಪನವರ ಮಾತನಾಡಿ, ಮಹಾಮಂಡಳವು ಸತತ 50 ವರ್ಷಗಳಿಂದ ಗಣೇಶ ಹಬ್ಬಕ್ಕೆ ಬೆನ್ನೆಲುಬಾಗಿ ನಿಂತಿದೆ. ಜತೆಗೆ ಸಮಾಜಮುಖಿ ಕಾರ್ಯಗಳನ್ನೂ ಮಾಡುತ್ತಿದೆ ಎಂದು ಬಣ್ಣಿಸಿದರು.
ಕೆಎಂಸಿಆರ್‌ಐ ಮಾಜಿ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ, ಸಾಹಿತ್ಯ ಪ್ರಕಾಶನದ ಮುಖ್ಯಸ್ಥ ಎಂ.ಎ. ಸುಬ್ರಹ್ಮಣ್ಯ, ಮಹಾಮಂಡಳದ ಉಪಾಧ್ಯಕ್ಷರಾದ ಅಲ್ತಾಫ್ ನವಾಜ್ ಕಿತ್ತೂರ, ಶಾಂತರಾಜ ಪೋಳ, ಕಾರ್ಯದರ್ಶಿ ಅಮರೇಶ ಹಿಪ್ಪರಗಿ, ಪ್ರಮುಖರಾದ ಎಸ್.ಎಸ್. ಕಮಡೊಳ್ಳಿಶೆಟ್ಟರ್, ಅನಿಲ ಕವಿಶೆಟ್ಟಿ, ಪ್ರೇಮನಾಥ ಚಿಕ್ಕತುಂಬಳ, ಪ್ರಕಾಶ ಬುರಬುರೆ, ಚನ್ನಬಸಪ್ಪ ಧಾರವಾಡಶೆಟ್ಟರ್ ಇತರರು ಭಾಗವಹಿಸಿದ್ದರು.