ಗಾಂಜಾವನ್ನು (ganja) ರೈಲ್ವೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಹುಬ್ಬಳ್ಳಿ: ನರಸಾಪೂರ-ಹುಬ್ಬಳ್ಳಿ-ಅಮರಾವತಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಾಗಿಸುತ್ತಿದ್ದ 8 ಕೆಜಿ 459 ಗ್ರಾಂ ತೂಕದ ಗಾಂಜಾವನ್ನು (ganja) ಇಲ್ಲಿಯ ರೈಲ್ವೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ರೈಲು ಗಾಡಿಯ ಜನರಲ್ ಬೋಗಿಗಳಲ್ಲಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು, ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್ 4ರಲ್ಲಿ ಬ್ಯಾಗ್‌ನಲ್ಲಿದ್ದ ಎರಡೂವರೆ ಕೆಜಿಯ 4 ಬಂಡಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಒಟ್ಟು 4.22 ಲಕ್ಷ ರೂ ಮೌಲ್ಯದ 8 ಕೆಜಿ 459 ಗ್ರಾಂ ಗಾಂಜಾ ಜಪ್ತಿ ಮಾಡಿದ್ದು, ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.