ಚಿನ್ನಾಭರಣ ದೋಚಿ (Robbed) ಪರಾರಿ 
ಧಾರವಾಡ

(Robbed)3 ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ

ಹುಬ್ಬಳ್ಳಿ: ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ಸೋಗಿನಲ್ಲಿ ಮೂರು ಕೋಟಿ ರೂ.ಗೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ದೋಚಿ (Robbed) ಪರಾರಿಯಾಗಿರುವ ಘಟನೆ ನಗರದ ಚನ್ನಮ್ಮ ವೃತ್ತದ ನಿಲೀಜಿನ್ ರಸ್ತೆ ಬಳಿ ನಡೆದಿದೆ.
ಚಿನ್ನಾಭರಣ ವ್ಯಾಪಾರಿ ಎಂ.ಆರ್. ಸುದಿನ್ ಅವರು ಅಂಗಡಿಗಳಿಗೆ ಆಭರಣ ಪೂರೈಸುವ ವ್ಯವಹಾರ ಮಾಡುತ್ತಿದ್ದರು. ಇಡಿ ಅಧಿಕಾರಿಗಳೆಂದು ಹೇಳಿಕೊಂಡ ಐವರ ತಂಡವು ಕೇರಳ ಮೂಲದ ಚಿನ್ನಾಭರಣ ವ್ಯಾಪಾರಿಯನ್ನು ವಿಚಾರಣೆ ನಡೆಸುವ ನೆಪದಲ್ಲಿ 2 ಕೆಜಿ 942 ಗ್ರಾಂ ಚಿನ್ನಾಭರಣ ಹಾಗೂ 2 ಲಕ್ಷ ರೂ. ನಗದು ದೋಚಿ ಪರಾರಿಯಾಗಿದೆ.
ನ. 15ರಂದು ಮಂಗಳೂರಿನಿಂದ ಬೆಳಗಾವಿಗೆ ಕೆಲಸಗಾರ ವಿವೇಕ ಜತೆ ಬರುವಾಗ ಚೈನ್, ಬ್ರಾಸ್ಲೆಟ್, ಉಂಗುರ ಸೇರಿ ಒಟ್ಟು 3.2 ಕೋಟಿ ರೂ. ಮೌಲ್ಯದ ಆಭರಣಗಳನ್ನು ತಂದಿದ್ದರು. ಹಳೇ ಬಸ್ ನಿಲ್ದಾಣ ಬಳಿಯ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದರು. ನ. 19ರಂದು ಧಾರವಾಡಕ್ಕೆ ಹೋಗಿ ಹಿಂದಿರುಗುವಾಗ ನಿಲೀಜಿನ್ ರಸ್ತೆಯಲ್ಲಿ ಅವರನ್ನು ತಡೆದ ತಂಡವು, ಇಡಿ ಅಧಿಕಾರಿಗಳೆಂದು ನಂಬಿಸಿ ಗುರುತಿನ ಚೀಟಿ ತೋರಿಸಿ, ಹಿಂದಿಯಲ್ಲಿ ಮಾತನಾಡಿದ್ದಾರೆ. ವಿಚಾರಣೆಗೆ ಕಚೇರಿಗೆ ಬನ್ನಿ ಎಂದು ಕಾರಿನಲ್ಲಿ ಕರೆದುಕೊಂಡು ಹೋಗಿದೆ.
ಅಕ್ರಮವಾಗಿ ಚಿನ್ನಾಭರಣ ಸಾಗಣೆ ಮಾಡುತ್ತಿರುವುದಾಗಿ ಸುದಿನ್ ಅವರನ್ನು ಐವರ ತಂಡ ಬೆದರಿಸಿದೆ. ಮೊಬೈಲ್ ಫೋನ್ ಪಡೆದು ಸಿಮ್ ತೆಗೆದಿದೆ. ನಂತರ ಸುದಿನ್ ಮೇಲೆ ಹಲ್ಲೆ ಡನೆಸಿ ಚಿನ್ನಾಭರಣವಿದ್ದ ಬ್ಯಾಗ್ ಕಿತ್ತುಕೊಂಡಿದೆ.
ಆರೋಪಿಗಳು ಬೆಳಗಾವಿಯ ಕಿತ್ತೂರು ಸಮೀಪ ಕೆಲಸಗಾರ ವಿವೇಕ ಅವರನ್ನು ಇಳಿಸಿದ್ದಾರೆ. ನಂತರ, ಸುದಿನ್ ಅವರನ್ನು ಎಂ.ಕೆ. ಹುಬ್ಬಳ್ಳಿ ರಸ್ತೆ ಮಧ್ಯೆ ಬಿಟ್ಟು ತಂಡ ಪರಾರಿಯಾಗಿದೆ ಎಂದು ಉಪನಗರ ಠಾಣೆಗೆ ನೀಡಿದ ದೂರಿನಲ್ಲಿ ವಿವರಿಸಲಾಗಿದೆ.
ಪ್ರತ್ಯೇಕ ತಂಡ ರಚನೆ: ಡಿಸಿಪಿ ಮಹಾನಿಂಗ ನಂದಗಾವಿ ಪ್ರತಿಕ್ರಿಯಿಸಿ, ಎರಡು ದಿನ ತಡವಾಗಿ ಬಂದು ದೂರು ನೀಡಲಾಗಿದೆ. ಈ ಕುರಿತು ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪ್ರತ್ಯೇಕ ಪೊಲೀಸ್ ಅಧಿಕಾರಿಗಳ ತಂಡ ರಚಿಸಲಾಗಿದೆ ಎಂದರು.