line ಬಳ್ಳಾರಿ-ಗುಂತಕಲ್ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ.
- 1,264 ಕೋಟಿ ರೂ. ವೆಚ್ಚಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ
- ರೈಲು ಜಾಲ 46 ಕಿ.ಮೀ. ವಿಸ್ತರಣೆಯಾಗಲಿದೆ.
- ಆರ್ಥಿಕ ಬೆಳವಣಿಗೆಗೆ ಸಾಕಾರವಾಗಲಿದೆ.
ಈ ಮಹತ್ವಾಕಾಂಕ್ಷಿ ಯೋಜನೆಯಿಂದ ಸುಮಾರು 99 ಗ್ರಾಮಗಳಿಗೆ ಸಂಪರ್ಕ ಕಲ್ಪಿಸಿದಂತಾಗುತ್ತಿದ್ದು, 7 ಲಕ್ಷ ಜನರಿಗೆ ಪ್ರಯೋಜನವಾಗಲಿದೆ ಎಂದಿದ್ದಾರೆ.
ಕರ್ನಾಟಕ ಮತ್ತು ಆಂದ್ರ್ರ್ರದೇಶ ನಡುವೆ ಬಳ್ಳಾರಿ-ಗುಂತಕಲ್ ರೈಲು ಮಾರ್ಗ ನಿರ್ಮಾಣದಿಂದ ರೈಲು ಜಾಲ 46 ಕಿ.ಮೀ. ವಿಸ್ತರಣೆಯಾಗಲಿದೆ.
ಇದರಿಂದ ಪ್ರಾದೇಶಿಕ ಸಂಪರ್ಕ ಮತ್ತಷ್ಟು ಬಲಗೊಳ್ಳುವ ಜತೆಗೆ ಸ್ಥಳೀಯವಾಗಿ ಆರ್ಥಿಕ ಬೆಳವಣಿಗೆಗೆ ಸಾಕಾರವಾಗಲಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ನಾಯಕತ್ವದಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ಪಾಲಿಗೆ ಹೆಚ್ಚು ರೈಲ್ವೆ ಯೋಜನೆಗಳ ಕೊಡುಗೆ ನೀಡುತ್ತಲೇ ಬಂದಿದೆ.
ಇದಕ್ಕಾಗಿ ಪ್ರಧಾನಿ ಅವರಿಗೆ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ, ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಕತಜ್ಞತೆ ಸಲ್ಲಿಸುವುದಾಗಿ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.