ಹುಬ್ಬಳ್ಳಿಯಲ್ಲಿ (HD Bants) ಭಾನುವಾರ ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಎಂಆರ್​ಜಿ ಗ್ರುಪ್ ಚೇರ್ಮನ್ ಡಾ. ಕೆ. ಪ್ರಕಾಶ ಶೆಟ್ಟಿ ಉದ್ಘಾಟಿಸಿದರು. ಶಾಸಕರಾದ ಅರವಿಂದ ಬೆಲ್ಲದ, ಪ್ರಸಾದ ಅಬ್ಬಯ್ಯ, ಪ್ರದೀಪ ಶೆಟ್ಟರ್, ಉದ್ಯಮಿ ಪ್ರಸನ್ನ ಶಂಕರ ಶೆಟ್ಟಿ, ಕೆ. ಸುರೇಶ ಶೆಟ್ಟಿ, ರಾಜೇಂದ್ರ ವಿ. ಶೆಟ್ಟಿ, ವಿಜಯಾನಂದ ಶೆಟ್ಟಿ ಇತರರು ಇದ್ದರು. 
ಧಾರವಾಡ

ನಾಡಿನ ಸಂಸ್ಕೃತಿಗೆ ಬಂಟರ (HD Bants) ಕೊಡುಗೆ ಅಪಾರ

ಹುಬ್ಬಳ್ಳಿ: ಉದ್ಯಮ, ಶಿಕ್ಷಣ, ವೈದ್ಯಕೀಯ(HD Bants) ಸೇರಿ ಎಲ್ಲ ಕ್ಷೇತ್ರದಲ್ಲಿ ಛಾಪು ಮೂಡಿಸಿರುವ ಬಂಟ ಸಮಾಜದವರು ಕನ್ನಡ ನಾಡಿನ ಸಂಸ್ಕೃತಿಯ ರಕ್ಷಣೆ-ಪೋಷಣೆಯಲ್ಲಿ ಅಪಾರ ಕೊಡುಗೆ ನೀಡಿದ್ದಾರೆ ಎಂದು ವಿಧಾನಸಭೆ ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ಹೇಳಿದರು.
ನಗರದಲ್ಲಿ ಭಾನುವಾರ ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶ-ವಿದೇಶದಲ್ಲಿ ಎಲ್ಲಿಯೇ ನೆಲೆಸಿರಲಿ ನಮ್ಮ ಸಂಸ್ಕೃತಿಯನ್ನು ಪರಿಚಯಿಸುವ ಕೆಲಸವನ್ನು ಬಂಟರು ಮಾಡಿಕೊಂಡು ಬಂದಿದ್ದಾರೆ. ದಾನ-ಧರ್ಮದಲ್ಲಿ ಬಂಟರು ಎತ್ತಿದ ಕೈ ಎಂದರು.
ಶಾಸಕ, ಸ್ಲಮ್ ಬೋರ್ಡ್ ಅಧ್ಯಕ್ಷ ಪ್ರಸಾದ ಅಬ್ಬಯ್ಯ ಮಾತನಾಡಿ, ತಮ್ಮ ಸಮಾಜದಲ್ಲಿನ ಆರ್ಥಿಕವಾಗಿ ಹಿಂದುಳಿದವರಿಗೆ ಸ್ಥಿತಿವಂತರು ಹೇಗೆ ಸಹಾಯ ಮಾಡಬೇಕು ಎಂಬುದಕ್ಕೆ ಬಂಟರು ಅನ್ಯರಿಗೆ ಮಾದರಿಯಾಗಿದ್ದಾರೆ. ಎಲ್ಲ ಸಮಾಜದೊಂದಿಗೆ ಪ್ರೀತಿ, ವಿಶ್ವಾಸ, ಸ್ನೇಹಪರ ಬಾಂಧವ್ಯ ಹಾಗೂ ಶ್ರಮ ಜೀವನ ಅವರ ಯಶಸ್ಸಿನ ಸೂತ್ರವಾಗಿದೆ ಎಂದು ಪ್ರಶಂಸಿಸಿದರು.
ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಮಾತನಾಡಿದರು. ಎಂಆರ್​ಜಿ ಗ್ರುಪ್ ಚೇರ್ಮನ್ ಡಾ. ಕೆ. ಪ್ರಕಾಶ ಶೆಟ್ಟಿ ಉದ್ಘಾಟಿಸಿದರು. ಉದ್ಯಮಿ ಪ್ರಸನ್ನ ಶಂಕರ ಶೆಟ್ಟಿ, ಕೆ. ಸುರೇಶ ಶೆಟ್ಟಿ, ರಾಜೇಂದ್ರ ವಿ. ಶೆಟ್ಟಿ, ಇತರರು ಇದ್ದರು. ಕೀರ್ತಿಶೇಷ ಕಟ್ಕೆರೆ ಶಂಕರ ಶೆಟ್ಟಿ ಸ್ಮರಣಾರ್ಥ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಮಾರು 10 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಸುಭಾಶ್ಚಂದ್ರ ಶೆಟ್ಟಿ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ನಡೆಸಿಕೊಟ್ಟರು. ಸಂಘದ ಸ್ಥಾಪಕ ಸದಸ್ಯರನ್ನು ಸನ್ಮಾನಿಸಲಾಯಿತು. ಅಧ್ಯಕ್ಷ ವಿಜಯಾನಂದ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.