ಧಾರವಾಡ: ಪ್ರಧಾನಿ ನರೇಂದ್ರ ಮೋದಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುತ್ತೇವೆ ಎಂದಿದ್ದರು. ಕೇಂದ್ರದಲ್ಲಿ ಕಳೆದ 11 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿಯವರು ಎಷ್ಟು ಉದ್ಯೋಗ ನೀಡಿದ್ದಾರೆ ಎಂಬುದನ್ನು ಹೇಳಲಿ ಎಂದು ಉಸ್ತುವಾರಿ ಸಚಿವ ಸಂತೋಷ ಲಾಡ್ ಆಗ್ರಹಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಲಿ ಹುದ್ದೆಗಳ ಭತಿರ್ಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೆ ಬಿಜೆಪಿಯವರು ಕೈ ಜೋಡಿಸಿದ್ದಾರೆ. ಉದ್ಯೋಗಾಕಾಂಕ್ಷಿಗಳು ನನ್ನನ್ನು ಭೇಟಿ ಮಾಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡಲು ಅವಕಾಶ ಇದೆ ಎಂದರು.
ನಾವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ 45 ಸಾವಿರ ಹುದ್ದೆ ಭತಿರ್ ಮಾಡಿದ್ದೇವೆ. ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಎಷ್ಟು ಭತಿರ್ ಮಾಡಿದ್ದಾರೆ? ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿಗಳು 65 ಸಾವಿರ ಹುದ್ದೆಗಳನ್ನು ಭತಿರ್ ಮಾಡಲಾಗುವುದು ಎಂದಿದ್ದಾರೆ. ಶ್ರೀ ಅಧಿಸೂಚನೆ ಪ್ರಕಟವಾಗಲಿದೆ. ಬಿಜೆಪಿಯವರು ಏಕೆ ಪ್ರತಿಭಟನೆ ಮಾಡುತ್ತಾರೆ ಎಂಬುದು ತಿಳಿಯುತ್ತಿಲ್ಲ. ಉದ್ಯೋಗ ಭರವಸೆ ನೀಡಿದ್ದ ಪ್ರಧಾನಿ ಮೋದಿ ವಿರುದ್ಧ ಮೊದಲು ಪ್ರತಿಭಟನೆ ಮಾಡಲಿ ಎಂದರು.