ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಇನಾಂವೀರಾಪೂರ (inamveerapura) ಗ್ರಾಮದಲ್ಲಿರುವ ವಿವೇಕಾನಂದ ದೊಡ್ಡಮನಿ ಅವರ ಮನೆಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.  
ಧಾರವಾಡ

(inamveerapura) ಲೋಪ ಎಸಗಿದವರ ವಿರುದ್ಧ ಕ್ರಮ

ಹುಬ್ಬಳ್ಳಿ: ಇನಾಂವೀರಾಪೂರದಲ್ಲಿ (inamveerapura) ನಡೆದ ಮರ್ಯಾದೆ ಹತ್ಯೆ ಪ್ರಕರಣದಲ್ಲಿ ಲೋಪ ಎಸಗಿದವರ ವಿರುದ್ಧ ಕ್ರಮಕ್ಕೆ ಸಂಬಂಧಿಸಿದ ಸಚಿವರೊಂದಿಗೆ ಮಾತನಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭರವಸೆ ನೀಡಿದರು.
ಇಲ್ಲಿಯ ದೇಶಪಾಂಡೆ ನಗರದ ವಿವೇಕಾನಂದ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿವೇಕಾನಂದ ದೊಡ್ಡಮನಿ ಕುಟುಂಬದವರ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದ ಬಳಿಕ ಅವರು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
ಇನಾಂವೀರಾಪೂರ ಗ್ರಾಮದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರಿಬ್ಬರು, ಬೆಳಗಲಿ ಗ್ರಾಪಂ ಪಿಡಿಒ ಅವರನ್ನು ಅಮಾನತು ಮಾಡಲಾಗಿದೆ. ಇನ್ನೂ ಕೆಲ ಇಲಾಖೆ ಅಧಿಕಾರಿಗಳು ನಿಯಮಾನುಸಾರ ಕರ್ತವ್ಯ ನಿರ್ವಹಿಸಿಲ್ಲ ಎಂಬ ದೂರುಗಳಿವೆ. ಈ ಕುರಿತು ತನಿಖೆ ನಡೆಸಿ ವರದಿ ಕೊಡಲು ಜಿಲ್ಲಾಧಿಕಾರಿಗಳು, ತನಿಖಾಧಿಕಾರಿಯನ್ನು ನೇಮಿಸಿ ಆದೇಶಿಸಿದ್ದಾರೆ. ಸಲ್ಲಿಸುವ ತನಿಖಾ ವರದಿಯನ್ವಯ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ತದನಂತರ ಇನಾಂವೀರಾಪೂರ ಗ್ರಾಮದಲ್ಲಿರುವ ವಿವೇಕಾನಂದ ದೊಡ್ಡಮನಿ ಅವರ ಮನೆಗೆ ತೆರಳಿ ಪರಿಶೀಲನೆ ನಡೆಸಿದ ಸಚಿವರು, ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದರು.