ಹುಬ್ಬಳ್ಳಿ ತಾಲೂಕಿನ ಇನಾಂವೀರಾಪೂರ (inamveerapura) ಗ್ರಾಮಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಹಾಗೂ ಶಾಸಕ ಎಂ.ಆರ್. ಪಾಟೀಲ ಬುಧವಾರ ಭೇಟಿ ನೀಡಿ, ಮಾಹಿತಿ ಪಡೆದರು. 
ಧಾರವಾಡ

(inamveerapura) ಘಟನೆ ಮರುಕಳಿಸದಂತೆ ಎಚ್ಚರಿಕೆ ಇರಲಿ

ಹುಬ್ಬಳ್ಳಿ: ತಾಲೂಕಿನ ಇನಾಂವೀರಾಪೂರ (inamveerapura) ಗ್ರಾಮಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಹಾಗೂ ಶಾಸಕ ಎಂ.ಆರ್. ಪಾಟೀಲ ಬುಧವಾರ ಭೇಟಿ ನೀಡಿ, ಪ್ರಕರಣದ ಹಿನ್ನೆಲೆ, ಸಾಮಾಜಿಕ ಪರಿಸ್ಥಿತಿ ಹಾಗೂ ಕುಟುಂಬದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದರು.
ಶಾಸಕ ಎಂ.ಆರ್. ಪಾಟೀಲ ಮಾತನಾಡಿ, ಈ ಗ್ರಾಮವು ನಮ್ಮ ವ್ಯಾಪ್ತಿಗೆ ಬರುತ್ತದೆ. ಈ ರೀತಿ ನಡೆದಿರುವ ಘಟನೆ ಅತ್ಯಂತ ನೋವಿನ ಸಂಗತಿ. ಇಂತಹ ಅಪರಾಧಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ದೌರ್ಜನ್ಯದಂತಹ ಘಟನೆಗಳು ಮರುಕಳಿಸದಂತೆ ಗ್ರಾಮಮಟ್ಟದಲ್ಲಿ ಮುನ್ನೆಚ್ಚರಿಕೆ ಮತ್ತು ಜಾಗೃತಿ ಮೂಡಿಸಲು ಮುಂದಾಗುವಂತೆ ಜಿಲ್ಲಾಧಿಕಾರಿ ದಿವ್ಯಪ್ರಭು ಅಧಿಕಾರಿಗಳಿಗೆ ಸೂಚಿಸಿದರು. ಘಟನೆ ಕುರಿತು ಪೊಲೀಸ್ ಇಲಾಖೆಯು ತ್ವರಿತವಾಗಿ ಕ್ರಮ ಕೈಗೊಂಡಿದ್ದು, ಗಂಭೀರವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ವಿವರಿಸಿದರು.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಶುಭಾ. ಪಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಡಾ.ಎಚ್.ಎಚ್. ಕುಕನೂರ, ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸ್‌ಇನ್‌ಸ್ಪೆಕ್ಟರ್ ಮುರಗೇಶ ಚನ್ನಣ್ಣವರ, ದಲಿತ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.