ಸಚಿವ ಸಂತೋಷ ಲಾಡ್​ ಧಾರವಾಡ ಹಾಗೂ ನವಲಗುಂದ ತಾಲೂಕಿನಲ್ಲಿ ಬೆಳೆಹಾನಿ ಪರಿಶೀಲಿಸಿದರು. 
ಧಾರವಾಡ

ಮಳೆ ಕೊರತೆಯಿಂದ ಬೆಳೆಹಾನಿ ಪರಿಶೀಲನೆ

ಧಾರವಾಡ: ಜಿಲ್ಲೆಯ ರೈತರು ಈ ಬಾರಿ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಜಿಲ್ಲೆಯ ಸುಮಾರು 2.90 ಲ ಹೆಕ್ಟೇರ್​ ಕೃಷಿಯೋಗ್ಯ ಭೂಮಿಯಲ್ಲಿ ಶೇ. 96 (2.80 ಲ ಹೆಕ್ಟೇರ್​) ಕ್ಕೂ ಹೆಚ್ಚು ಪ್ರದೇಶದಲ್ಲಿ ಬಿತ್ತನೆ ನಡೆದಿದೆ. 45 ಸಾವಿರ ಹೆಕ್ಟೇರ್​ಗೂ ಹೆಚ್ಚು ಪ್ರದೇಶದಲ್ಲಿ ಹೆಸರು, ಉದ್ದು, 40 ಸಾವಿರ ಹೆಕ್ಟೇರ್​ಗೂ ಹೆಚ್ಚು ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆಯಲಾಗಿದೆ. ಸೋಯಾಬೀನ್​, ಹತ್ತಿ, ಕಡಲೆಕಾಯಿ, ಕಬ್ಬು, ಈರುಳ್ಳಿ ಸೇರಿ ವಿವಿಧ ತೋಟಗಾರಿಕಾ ಬೆಳೆಗಳೂ ಮಳೆ ಸಂಕಷ್ಟಕ್ಕೆ ಸಿಲುಕಿವೆ ಎಂದು ಸಂಪುಟ ದರ್ಜೆ ಸಚಿವ ಸಂತೋಷ ಲಾಡ್​ ಹೇಳಿದರು.
ನವಲಗುಂದ ತಾಲೂಕಿನ ಶಿರಕೋಳದಲ್ಲಿ ಬೆಳೆ ಹಾನಿ ವೀಕ್ಷಣೆ ಮಾಡಿ ಮಾತನಾಡಿದರು. ಮುಖ್ಯಮಂತ್ರಿಗಳ ಸೂಚನೆಯಂತೆ ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಭೇಟಿ ನೀಡಿ ಬೆಳೆಗಳ ವಾಸ್ತವ ಸ್ಥಿತಿ ಪರಿಶೀಲಿಸಲಾಗುತ್ತಿದೆ. ಸ್ಥಳಿಯ ರೈತರು, ರೈತ ಮುಖಂಡರು ಹಾಗೂ ತಾಂತ್ರಿಕ ತರೊಂದಿಗೆ ಚರ್ಚೆ ನಡೆಸಿ, ವರದಿ ಸಿದ್ಧಪಡಿಸಲಾಗುತ್ತಿದೆ. ಅದನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.
ಹೊಲಗಳಲ್ಲಿ ಹಸಿರು ಕಾಣುತ್ತಿದ್ದರೂ ಬೆಳೆಗಳ ಬೆಳವಣಿಗೆ ಸಮರ್ಪಕವಾಗಿಲ್ಲ. ಅಗತ್ಯ ಸಮಯದಲ್ಲಿ ಮಳೆ ಸುರಿಯದ ಪರಿಣಾಮ ಬೆಳೆಗಳು ಕುಂಠಿತ ಬೆಳವಣಿಗೆ ಹೊಂದಿದ್ದು, ರೈತರಿಗೆ ಹೆಚ್ಚಿನ ನಷ್ಟ ಉಂಟಾಗಿದೆ. ಕೆಲವು ಪ್ರದೇಶಗಳಲ್ಲಿ ನಿರೀೆಗಿಂತ ಹೆಚ್ಚು ಮಳೆಯಾಗಿದ್ದರೂ ಅದು ಸಮರ್ಪಕ ಸಮಯದಲ್ಲಿ ಹಾಗೂ ಸಮಾನವಾಗಿ ಸುರಿಯದ ಕಾರಣ ಬೆಳೆಗಳಿಗೆ ಪ್ರಯೋಜನವಾಗಿಲ್ಲ ಎಂದು ತಿಳಿಸಿದರು.
ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಬೆಳೆ ವಿಮೆ ಸೇರಿ ಸರ್ಕಾರದಿಂದ ಹಾಗೂ ವಿಮಾ ಸಂಸ್ಥೆಗಳ ಮೂಲಕ ದೊರೆಯಬಹುದಾದ ಎಲ್ಲ ಸೌಲಭ್ಯಗಳನ್ನು ರೈತರಿಗೆ ತಲುಪಿಸುವ ಪ್ರಯತ್ನ ಮಾಡಲಾಗುವುದು. ರೈತ ಮುಖಂಡರು ಹಾಗೂ ಶಾಸಕರ ಸಲಹೆಗಳನ್ನು ಸಹ ಸರ್ಕಾರದ ಗಮನಕ್ಕೆ ತರಲಾಗುವುದು. ಬರ ೂಷಣೆಗೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಹಾಗೂ ನಿಗದಿತ ತಾಂತ್ರಿಕ ಮಾನದಂಡಗಳಿದ್ದು, ಅವುಗಳನ್ನು ಅನುಸರಿಸಿ ನಿರ್ಧಾರ ಕೈಗೊಳ್ಳಬೇಕಾಗಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ರೈತರ ಸಮಸ್ಯೆಯನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಹೇಳಿದರು.
ಶಾಸಕ ಎನ್​.ಎಚ್​. ಕೋನರೆಡ್ಡಿ ಮಾತನಾಡಿ, ಸಚಿವರ ನೇತೃತ್ವದಲ್ಲಿ ಬರ ಪರಿಸ್ಥಿತಿಯ ಅವಲೋಕನ ನಡೆಸಲಾಗುವುದು. ತಾಂತ್ರಿಕವಾಗಿ ಚಚಿರ್ಸಿ ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಂಡು ರೈತರಿಗೆ ಪರಿಹಾರ ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಧಾರವಾಡ ತಾಲೂಕಿನ ಹಾರೋಬೆಳವಡಿ ಮತ್ತು ನವಲಗುಂದ ತಾಲೂಕಿನ ಶಿರೂರ, ಶಿರಕೋಳ, ಮೊರಬ ಹಾಗೂ ತಿರ್ಲಾಪುರ ಗ್ರಾಮಗಳಿಗೆ ಭೇಟಿ ನೀಡಿ, ಬೆಳೆಹಾನಿ ಪರಿಶೀಲನೆ ಮಾಡಿದರು.
ಜಿಲ್ಲಾಧಿಕಾರಿ ಸ್ನೇಹಲ್​.ಆರ್​., ಜಿಪಂ ಸಿಇಒ ಭುವನೇಶ ಪಾಟೀಲ, ಎಸ್ಪಿ ಗುಂಜನ್​ ಆರ್ಯ, ಪ್ರೊಬೆಷನರಿ ಐಎಎಸ್​ ಅಧಿಕಾರಿ ಅನುಪ್ರಿಯಾ ಸಾಕ್ಯಾ, ಉಪ ವಿಭಾಗಾಧಿಕಾರಿ ಪ್ರಭಾವತಿ ಕೀರಪುರ, ತಹಶೀಲ್ದಾರ ಸುಧೀರ ಸಾಹುಕಾರ ಅಧಿಕಾರಿಗಳು ಇದ್ದರು.