ಗ್ಯಾರಂಟಿ ಯೋಜನೆಗಳ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆ
ಧಾರವಾಡ: ಸರ್ಕಾರದ ನಿಯಮಾನುಸಾರ ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಗತ್ಯ ಮಾಹಿತಿಯುಳ್ಳ ಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯ ಎಸ್.ಆರ್. ಪಾಟೀಲ ಹೇಳಿದರು.
ಜಿಪಂ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಅನ್ನಭಾಗ್ಯ ಯೋಜನೆಯಡಿ ಪಡಿತರ ವಿತರಿಸುವ ಅಂಗಡಿಗಳಲ್ಲಿ ಯೋಜನೆಗೆ ಸಂಬಂಧಿಸಿದ ಮಾಹಿತಿ ಹಾಗೂ ದರಪಟ್ಟಿ ಒಳಗೊಂಡ ಬೋರ್ಡ್ಗಳನ್ನು ಅಳವಡಿಸಬೇಕು. ಸಾರ್ವಜನಿಕರಿಗೆ ಪಡಿತರದ ದರ ಹಾಗೂ ವಿತರಿಸಲಾಗುವ ಸಾಮಗ್ರಿಗಳ ಕುರಿತು ಸ್ಪಷ್ಟ ಮಾಹಿತಿ ದೊರೆಯುವಂತೆ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಜಿಲ್ಲೆಯ ಯಾವುದೇ ಅನ್ನಭಾಗ್ಯ ಅಂಗಡಿಯಲ್ಲಿ ಬೋರ್ಡ್ ಅಥವಾ ದರಪಟ್ಟಿ ಅಳವಡಿಸದಿದ್ದರೆ ಅಂತಹ ಅಂಗಡಿಗಳ ಕುರಿತು ಪರಿಶೀಲನೆ ನಡೆಸಿ, ನಿಯಮಾನುಸಾರ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಸರ್ಕಾರದ ಯೋಜನೆಗಳು ಅರ್ಹ ಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ನಿರಂತರವಾಗಿ ಮೇಲ್ವಿಚಾರಣೆ ನಡೆಸಬೇಕು ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕು ಎಂದು ಹೇಳಿದರು.
ವಿದ್ಯುತ್ ಕಾಮಗಾರಿ ವೇಳೆ ಲೈನ್ಮನ್ಗಳ ನಿರ್ಲಕ್ಷ$್ಯದಿಂದಾಗಿ ಮೂವರು ಸಾರ್ವಜನಿಕರು ಮೃತಪಟ್ಟಿದ್ದಾರೆ. ಇಂತಹ ರ್ದುಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ವಿದ್ಯುತ್ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಸುರತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಬೇಕು.
ಜಿಪಂ ಸಿಇಒ ಭುವನೇಶ ಪಾಟೀಲ ಮಾತನಾಡಿ, ಮುಖ್ಯಮಂತ್ರಿ ಅವರ ನಿರ್ದೇಶನದಂತೆ ನಗರ ಪ್ರದೇಶದ ಪ್ರತಿಯೊಂದು ವಾರ್ಡ್ ಮಟ್ಟದಲ್ಲಿ ಆರು ಜನರನ್ನು ಆಯ್ಕೆ ಮಾಡಿ ಸಮಿತಿ ರಚಿಸಿ, ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಉಪಾಧ್ಯ ಸುಧೀರ ಬೋಳಾರ, ಮುರಗಯ್ಯ ವಿರಕ್ತಮಠ, ರತ್ನಾ ತೇಗೂರಮಠ, ರೇಹನ್ ಐನಾಪೂರಿ, ಶಾಂತಪ್ಪ ಅಕ್ಕಿ, ಅರವಿಂದ ಏಗನಗೌಡರ, ಬಸಪ್ಪ ಮಹಾಬಲೇಶ್ವರ ಮಾತನಾಡಿದರು.
ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಸದಸ್ಯ ವರ್ಧಮಾನ ಹಿರೇಗೌಡರ, ಶಿವಾನಂದ ಭೂಮಣ್ಣನವರ, ವಿನಾಯಕ ಕುರುಬರ, ಸಾವಿತ್ರಿ ಭಗವತಿ ಇತರರಿದ್ದರು. ಜಿಪಂ ಉಪ ಕಾರ್ಯದಶಿರ್ ಮಲ್ಲಿಕಾರ್ಜುನ ತೊದಲಬಾಗಿ ಸ್ವಾಗತಿಸಿ, ವಂದಿಸಿದರು.