ಜಿಲ್ಲಾಧಿಕಾರಿ ಸ್ನೇಹಲ್ ಆರ್. 
ಧಾರವಾಡ

ಮುಂಜಾಗ್ರತಾ ಕ್ರಮಕ್ಕೆ ಅಧಿಕಾರಿಗಳಿಗೆ ನಿರ್ದೇಶನ

ಜಗದೀಶ ಹೊಂಬಳಿ
ಧಾರವಾಡ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಮಳೆಯಿಂದ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ಕೃಷಿ ಚಟುವಟಿಕೆಗಳು ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಸಂಬಂಧಿಸಿದ ಅಽಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗುತ್ತಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 2026ನೇ ಮುಂಗಾರು ಹಂಗಾಮಿನಲ್ಲಿ ಜೂ. 1ರಿಂದ ಜುಲೈ 10ರವರೆಗೆ ವಾಡಿಕೆ ಮಳೆ 173.3 ಮೀ.ಮೀ ಆಗಬೇಕಾಗಿತ್ತು. ವಾಸ್ತವಿಕವಾಗಿ 141.1 ಮೀ.ಮೀ ಮಳೆಯಾಗಿದ್ದು, ಶೇ. 19ರಷ್ಟು ಮಳೆ ಕೊರತೆಯಾಗಿದೆ. ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ 2.82 ಲಕ್ಷ ಹೆಕ್ಟರ್ ಗುರಿ ಇದ್ದು, ಪ್ರಸ್ತುತ 2.63 ಲಕ್ಷ ಹೆಕ್ಟರ್ ಬಿತ್ತನೆಯಾಗಿದೆ. ಶೇ. 93ರಷ್ಟು ಸಾಧನೆಯಾಗಿದೆ.
2026ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ 18,457 ಕ್ವಿಂಟಲ್ ಗುರಿಯಿದ್ದು, ಪ್ರಸ್ತುತ ರೈತರಿಗೆ 15,853 ಕ್ವಿಂಟಲ್ ವಿತರಣೆ ಮಾಡಲಾಗಿದೆ. ಬಾಕಿ 2,604 ಕ್ವಿಂಟಲ್ ದಾಸ್ತಾನು ಇದೆ. ಜಿಲ್ಲೆಯಲ್ಲಿ ಯಾವುದೇ ಬಿತ್ತನೆ ಬೀಜದ ವಿತರಣೆಯಲ್ಲಿ ಕೊರತೆ ಇಲ್ಲ. 57,597 ಮೆ.ಟನ್ ರಸಗೊಬ್ಬರ ದಾಸ್ತಾನಿದೆ. ಪ್ರಸ್ತುತ ರೈತರಿಗೆ 31,573 ಮೆ. ಟನ್ ಮಾರಾಟ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 26,024 ಮೆ.ಟನ್ ರಷ್ಟು ಉಳಿಕೆ ದಾಸ್ತಾನು ಇದ್ದು, ಜಿಲ್ಲೆಯಲ್ಲಿ ರಸಗೊಬ್ಬರ ವಿತರಣೆಯಲ್ಲಿ ಕೊರತೆ ಇಲ್ಲ.
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಈಗಾಗಲೇ ಆರಂಭವಾಗಿದ್ದು, ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳನ್ನು ತಾವೇ ಸ್ವತಃ ಛಾಯಾಚಿತ್ರ ಸಮೇತ ಸಮೀಕ್ಷೆ ಕೈಗೊಳ್ಳಬಹುದಾಗಿದೆ. ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ತಂತ್ರಾAಶ (ಆ್ಯಪ್) ಬಿಡುಗಡೆಯಾಗಿದ್ದು, ರೈತರು ಇದನ್ನು ಗೂಗಲ್ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಬೆಳೆ ಸಮೀಕ್ಷೆ ಕೈಗೊಳ್ಳಬಹುದು.
ಬೆಳೆಹಾನಿಯಾದರೆ ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವ ಸಂದರ್ಭದಲ್ಲಿ ಬೆಳೆ ಸಮೀಕ್ಷೆ ಆಧಾರವಾಗಿಟ್ಟಕೊಂಡು ಸಿದ್ಧಪಡಿಸುವುದರಿಂದ ರೈತರು ತಪ್ಪದೇ ತಮ್ಮ ಜಮೀನಿನಲ್ಲಿರುವ ಕೃಷಿ, ತೋಟಗಾರಿಕೆ, ಅರಣ್ಯ, ರೇಷ್ಮೆ ಬೆಳೆಗಳ ವಿವರವನ್ನು ಆ್ಯಪ್‌ನಲ್ಲಿ ನಮೂದಿಸಬೇಕು. ಮಾಹಿತಿಗೆ ರೈತ ಸಂಪರ್ಕ ಕೇಂದ್ರದ ಕೃಷಿ ಅಽಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಽಕಾರಿಗಳು, ಸಹಾಯಕ ತೋಟಗಾರಿಕೆ ಅಽಕಾರಿಗಳು, ರೇಷ್ಮೆ ಇಲಾಖೆಯ ಅಽಕಾರಿಗಳನ್ನು ಸಂಪರ್ಕಿಸಬೇಕು ಎಂದು ಸ್ನೇಹಲ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.