(karave protest) ರೈಲ್ವೆಯಲ್ಲಿ ನೇಮಕಾತಿ, ರೈಲ್ವೆ ನೌಕರರ ಮುಂಬಡ್ತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣಕುಮಾರ ಶೆಟ್ಟಿ ಬಣ) ಕಾರ್ಯಕರ್ತರು, ಹುಬ್ಬಳ್ಳಿಯಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. 
ಧಾರವಾಡ

(karave protest) ಕನ್ನಡಕ್ಕೆ ಅಪಮಾನವಾದರೆ ಸುಮ್ಮನಿರಬೇಕೆ?

ಪ್ರಮುಖ ಮುಖ್ಯಾಂಶಗಳು

  • * ರೈಲ್ವೆ ನೇಮಕಾತಿ, ಮುಂಬಡ್ತಿಯಲ್ಲಿ ಕನ್ನಡ ಭಾಷೆಗೆ ಒತ್ತಾಯ
  • ಕರವೇ ಕಾರ್ಯಕರ್ತರಿಂದ ಹುಬ್ಬಳ್ಳಿಯಲ್ಲಿ ಪ್ರತಿಭಟನೆ
ಹುಬ್ಬಳ್ಳಿ: ರೈಲ್ವೆ ನೌಕರರ ಮುಂಬಡ್ತಿ ಪರೀಕ್ಷೆಗಳಲ್ಲಿ ಆಗುತ್ತಿರುವ ಅನ್ಯಾಯ, ಸಂವಿಧಾನಾತ್ಮಕ ಹಕ್ಕುಗಳ ಉಲ್ಲಂಘನೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣಕುಮಾರ ಶೆಟ್ಟಿ ಬಣ) ಕಾರ್ಯಕರ್ತರು, ನಗರದಲ್ಲಿ ಮಂಗಳವಾರ (karave protest) ಪ್ರತಿಭಟನೆ ನಡೆಸಿದರು.
ಡಾ.ಬಿ.ಆರ್. ಅಂಬೇಡ್ಕರ್ ಸರ್ಕಲ್‌ನಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪ್ರತಿಭಟನಾ ಮೆರವಣಿಗೆ ಮೂಲಕ ರೇಲ್ ಸೌಧದವರೆಗೆ ಸಾಗಿದರು.
ಕನ್ನಡದ ಅಭ್ಯರ್ಥಿಗಳು ಹಾಗೂ ನೌಕರರಿಗೆ ಸಮಾನ ಅವಕಾಶಗಳು ದೊರೆಯುತ್ತಿಲ್ಲ. ರೈಲ್ವೆ ನೇಮಕಾತಿ, ಮುಂಬಡ್ತಿ ಪರೀಕ್ಷೆಯಲ್ಲಿ ಹಿಂದಿ ಮತ್ತು ಇಂಗ್ಲಿಷ್ ಭಾಷೆಗೆ ಮಾತ್ರ ಅವಕಾಶವಿದೆ. ಇದರಿಂದ ರಾಜ್ಯದ ಅಭ್ಯರ್ಥಿಗಳು ವಿವಿಧ ಹುದ್ದೆಗಳಲ್ಲಿ ಮುಂಬಡ್ತಿ ಪಡೆಯದೇ ಸಮಸ್ಯೆ ಎದುರಿಸುತ್ತಿದ್ದಾರೆ. ಮಾತೃಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.
ಕರವೇ ಧಾರವಾಡ ಜಿಲ್ಲಾ ಅಧ್ಯಕ್ಷ ಮಂಜುನಾಥ ಲೂತಿಮಠ ಮಾತನಾಡಿ, ರೈಲ್ವೆ ನೌಕರರ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಕಡ್ಡಾಯವಾಗಿ ಅವಕಾಶ ನೀಡಬೇಕು. ಒಂದು ವೇಳೆ ಅವಕಾಶ ನೀಡದೇ ಪರೀಕ್ಷೆಗೆ ಅಧಿಸೂಚನೆ ಹೊರಡಿಸಿದರೆ, ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಪಿ. ಅನಂತ ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಪ್ರತಿಕ್ರಿಯಿಸಿ, ಕನ್ನಡದ ಬಗ್ಗೆ ನಮಗೆ ಅಭಿಮಾನವಿದೆ. ಸದ್ಯ ಉಳಿದ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿ ನಡೆಸಲಾಗುತ್ತಿದೆ. ಮುಂಬಡ್ತಿ ಪರೀಕ್ಷೆಗಳಲ್ಲೂ ಕನ್ನಡ ಬಳಕೆ ಕುರಿತು ಹಿರಿಯ ಅಧಿಕಾರಿಗಳಿಗೆ ಕಳುಹಿಸಲಾಗುವುದು ಎಂದು ಭರವಸೆ ನೀಡಿದರು.
ಪಾಪು ಧಾರೆ, ಬಸವರಾಜ ತಾಳಿಕೋಟಿ, ಮುತ್ತು ಅರಗಿಣಿ ಶೆಟ್ಟಿ, ಮಂಜುನಾಥ ವಾಲೀಕಾರ, ತಿಮ್ಮಣ್ಣ ದೋಣಿ, ಪ್ರವೀಣ ಗಾಯಕವಾಡ, ಅಕ್ಷಯ, ಶ್ರೀಶೈಲಂ ಮಿರ್ಜಿ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.