Kargil ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ಹುಬ್ಬಳ್ಳಿಯ ಶ್ರೀ ಕಾಡಸಿದ್ದೇಶ್ವರ ಕಲಾ ಹಾಗೂ ಎಚ್.ಎಸ್. ಕೋತಂಬ್ರಿ ವಿಜ್ಞಾನ ಸಂಸ್ಥೆಯಲ್ಲಿ ಎಬಿವಿಪಿಯಿಂದ ಆಯೋಜಿಸಿದ್ದ ಕಾರ್ಗಿಲ್ ವಿಜಯ ಗಾಥೆ ಕಾರ್ಯಕ್ರಮದಲ್ಲಿ ಎನ್ಸಿಸಿ ಅಧಿಕಾರಿಗಳು ಹಾಗೂ ಕೆಡೆಟ್ಗಳು ಪಾಲ್ಗೊಂಡಿದ್ದರು.
- ಯುವಕರು ದೇಶಸೇವೆಯ ಮನೋಭಾವ ಬೆಳೆಸಿಕೊಳ್ಳುವಂತೆ ಸಲಹೆ
- ದೇಶದ ಏಕತೆಯ ಸಂಕೇತವಾಗಿದೆ
- ಎನ್ಸಿಸಿ ಕೆಡೆಟ್ಗಳು ಇದ್ದರು.
ಹುಬ್ಬಳ್ಳಿ :
ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ಶ್ರೀ ಕಾಡಸಿದ್ದೇಶ್ವರ ಕಲಾ ಹಾಗೂ ಎಚ್.ಎಸ್. ಕೋತಂಬ್ರಿ ವಿಜ್ಞಾನ ಸಂಸ್ಥೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಆಯೋಜಿಸಿದ್ದ ಕಾರ್ಗಿಲ್ ವಿಜಯ ಗಾಥೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾರ್ಗಿಲ್ ಯುದ್ಧದ ಇತಿಹಾಸ, ಭಾರತೀಯ ಸೈನಿಕರ ಶೌರ್ಯ, ತ್ಯಾಗ ಮತ್ತು ದೇಶಭಕ್ತಿಯ ಮಹತ್ವವನ್ನು ಇದೇ ಸಂದರ್ಭದಲ್ಲಿ ವಿವರಿಸಿದರು.
ಅತಿಥಿಗಳಾಗಿದ್ದ ಮಾಜಿ ಯೋಧ ಹಾಗೂ ಸ್ಪೋರ್ಟ್ಸ್ ಶೂಟಿಂಗ್ ಅಕಾಡೆಮಿಯ ಸಂಸ್ಥಾಪಕ ರವಿಚಂದ್ರನ್ ಬಾಳೆಹೊಸೂರು, ಕಾರ್ಗಿಲ್ ಯುದ್ಧದ ತಮ್ಮ ಅನುಭವಗಳನ್ನು ಹಂಚಿಕೊಂಡು, ಯುವಕರು ದೇಶಸೇವೆಯ ಮನೋಭಾವ ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು.
ಪರಿಷತ್ ಕರ್ನಾಟಕ ಉತ್ತರ ಪ್ರಾಂತದ ಕಾರ್ಯದರ್ಶಿ ದರ್ಶನ್ ಹೆಗಡೆ ಮಾತನಾಡಿದರು. ಪ್ರಾಚಾರ್ಯರಾದ ಸುಮಂಗಲಾ ಪಾಟೀಲ, ಐಕ್ಯೂಎಸಿ ಸಂಯೋಜಕ ಡಾ. ಸಿದ್ದೇಶ ಎಂ.ಬಿ., ಎನ್ಸಿಸಿ ಅಧಿಕಾರಿ ಲೆಫ್ಟಿನೆಂಟ್ ಸಿ.ಕೆ. ಪಾಟೀಲ, ಎನ್ಸಿಸಿ ಕೆಡೆಟ್ಗಳು, ವಿದ್ಯಾರ್ಥಿಗಳು, ಇದ್ದರು.