kittel college champion team
ಧಾರವಾಡ: ನಗರದ ಕರ್ನಾಟಕ ವಿಶ್ವವಿದ್ಯಾಲಯ ಅಂತರ ಮಹಾವಿದ್ಯಾಲಯ ಏಕವಲಯ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಿಟೆಲ್ ಕಲಾ ಮಹಾವಿದ್ಯಾಲಯ ಚಾಂಪಿಯನ್ ಸ್ಥಾನ ಪಡೆಯಿತು.
ಕಿಟೆಲ್ ಕಲಾ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಪುರುಷರ ಸ್ಪರ್ಧೆಯಲ್ಲಿ ಗಜೇಂದ್ರಗಡದ ಭೂಮರೆಡ್ಡಿ ಮಹಾವಿದ್ಯಾಲಯ ತಂಡ ದ್ವೀತಿಯ ಸ್ಥಾನ ಪಡೆಯಿತು. ಮಹಿಳೆಯರ ವಿಭಾಗದಲ್ಲಿ ಧಾರವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ ಹಾಗೂ ಕಿಟೆಲ್ ಕಲಾ ಮಹಾವಿದ್ಯಾಲಯ ದ್ವೀತಿಯ ಸ್ಥಾನ ಪಡೆಯಿತು. ಪಂದ್ಯಾವಳಿಯಲ್ಲಿ 12ಕ್ಕೂ ಹೆಚ್ಚಿನ ತಂಡಗಳು ಭಾಗವಹಿಸಿ ಕ್ರೀಡಾ ಸ್ಫೂರ್ತಿ ಮೆರೆದವು.