ಹುಬ್ಬಳ್ಳಿಯ labor ಶ್ರಮಿಕ ಭವನದಲ್ಲಿ ಧಾರವಾಡ ಜಿಲ್ಲಾ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಹಿತರಕ್ಷಣಾ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ರಿಯ ಕಾರ್ಮಿಕರನ್ನು ಗೌರವಿಸಲಾಯಿತು.  
ಧಾರವಾಡ

labor ಕಾರ್ಮಿಕರ ಬೇಡಿಕೆಗೆ ಸ್ಪಂದನೆ

ಮರಿದೇವ ಹೂಗಾರ
ಹುಬ್ಬಳ್ಳಿ: ಇಲ್ಲಿಯ ಶ್ರಮಿಕ ಭವನದಲ್ಲಿ ಧಾರವಾಡ ಜಿಲ್ಲಾ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ labor ಹಿತರಕ್ಷಣಾ ಸಂಘವನ್ನು ಬುಧವಾರ ಉದ್ಘಾಟಿಸಲಾಯಿತು.
ಸಹಾಯಕ ಕಾರ್ಮಿಕ ಆಯುಕ್ತ ಸಚಿನ್ ಹಳೇಮನಿ ಉದ್ಘಾಟಿಸಿ ಮಾತನಾಡಿ, ಕಾರ್ಮಿಕರ ನ್ಯಾಯಯುತ ಬೇಡಿಕೆಗಳಿಗೆ ಕಾರ್ಮಿಕ ಇಲಾಖೆ ಹಾಗೂ ಕಲ್ಯಾಣ ಮಂಡಳಿ ಸಂಪೂರ್ಣ ಸಹಕಾರ ನೀಡುತ್ತದೆ. ನಮ್ಮ ಮಟ್ಟದಲ್ಲಿರುವ ಕಾರ್ಮಿಕ ಸಮಸ್ಯೆಗಳನ್ನು ಇದೇ ತಿಂಗಳನಲ್ಲಿ ಎಲ್ಲ ಕಾರ್ಮಿಕ ಸಂಘದ ಮುಖಂಡರ ಸಭೆ ಕರೆದು ಚರ್ಚಿಸಿ ಪರಿಹಾರ ಕಲ್ಪಿಸಲಾಗುವುದು ಎಂದರು.
ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ದುರುಗಪ್ಪ ಚಿಕ್ಕತುಂಬಳ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ಹಿರಿಯ ಕಾರ್ಮಿಕರು ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕಾರ್ಮಿಕ ಅಧಿಕಾರಿಗಳಾದ ಮಾರಿಕಾಂಬ ಹುಲಕೋಟಿ, ಅಕ್ಬರ್ ಮುಲ್ಲಾ, ಹಿರಿಯ ಕಾರ್ಮಿಕ ನಿರೀಕ್ಷಕರಾದ ಅಶೋಕ ಒಡೆಯರ್, ಮಿನಾಕ್ಷಿ ಸಿಂದಿಹಟ್ಟಿ, ಕಾರ್ಮಿಕ ಮುಖಂಡರಾದ ಎನ್. ರಮೇಶ, ಎ.ಎಸ್. ಪೀರಜಾದೆ, ಎಂ.ಎಚ್. ಮುಲ್ಲಾ, ಜಯರಾಮ ತಿಮ್ಮಸಂದ್ರ, ಸಂಜೀವ ದಾಯಗೋಡಿ ಇದ್ದರು.