ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಣೆ ಕಾರ್ಯಕ್ರಮ 
ಧಾರವಾಡ

ಕಾರ್ಮಿಕರ ಮಕ್ಕಳಿಗೆ ಶಿಷ್ಯ ವೇತನ ಸಿಗುತ್ತಿಲ್ಲ

ಧಾರವಾಡ: ರಾಜ್ಯ ಸರ್ಕಾರ ಕಾರ್ಮಿಕರ ಮಕ್ಕಳಿಗೆ ಶಿಷ್ಯ ವೇತನ ಕೊಡುತ್ತಿಲ್ಲ. ಕಾರ್ಮಿಕ ಇಲಾಖೆಗೆ ನೀಡುತ್ತಿದ್ದ ಅನುದಾನ ಕಟ್ ಮಾಡಿದೆ ಎಂದು ವಿಧಾನಸಭೆ ವಿರೋಧಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆರೋಪಿಸಿದರು.
ಧಾರವಾಡದ ಕರ್ನಾಟಕದ ಕುಲಪುರೋಹಿತ ಆಲೂರ ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿಯಿಂದ ಮಂಗಳವಾರ ಆಯೋಜಿಸಿದ್ದ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಸುರಕ್ಷಿತ ಕಿಟ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಿಜೆಪಿ ಸರ್ಕಾರ ಇದ್ದಾಗ ಕಾರ್ಮಿಕ ಇಲಾಖೆಗೆ ಬಹಳಷ್ಟು ಅನುದಾನ ನೀಡಿದೆ. ಕೇಂದ್ರ ಸರ್ಕಾರದಿಂದಲೂ ಕಾರ್ಮಿಕ ಇಲಾಖೆಗೆ ಸೌಲಭ್ಯ ನೀಡಲಾಗುತ್ತಿದೆ. ಆದರೆ, ಕಾಂಗ್ರೆಸ್ ಸರ್ಕಾರ ಅನುದಾನ ಸಮರ್ಪಕ ಅನುದಾನ ನೀಡುತ್ತಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಽಕಾರಕ್ಕೆ ಬಂದರೆ ಎಲ್ಲ ರೀತಿಯ ಅನುದಾನ ನೀಡಲಿದೆ ಎಂದರು.
ಮೇಯರ್ ಜ್ಯೋತಿ ಪಾಟೀಲ, ಕಾರ್ಮಿಕ ಅಽಕಾರಿಗಳಾದ ಅಕ್ಬರ್ ಮುಲ್ಲಾ, ಮಾರಿಕಂಬ ಹುಲಕೋಟಿ, ಕಾರ್ಮಿಕ ಸಂಘಟನೆಯ ಚನ್ನವೀರಗೌಡ ಪಾಟೀಲ, ಮಂಜು ಮಲ್ಲಿಗವಾಡ, ಬಸವರಾಜ ಗರಗ, ರೂಪ ಚೌದರಿ ವೇದಿಕೆಯಲ್ಲಿದ್ದರು.