ವಿಧಾನ ಪರಿಷತ್ ಸದಸ್ಯ ಎಫ್.ಎಚ್. ಜಕ್ಕಪ್ಪನವರ ಪ್ರಗತಿ ಪರಿಶೀಲನೆ
ಧಾರವಾಡ: ನ್ಯಾಯಾಲಯದಲ್ಲಿ ಬಾಕಿ ಇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ತನಿಖಾ ಹಂತದಲ್ಲಿರುವ ಪ್ರಕರಣಗಳನ್ನು ಶೀಘ್ರದಲ್ಲಿಯೇ ಇತ್ಯರ್ಥಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಫ್.ಎಚ್. ಜಕ್ಕಪ್ಪನವರ ಅಽಕಾರಿಗಳಿಗೆ ಸೂಚಿಸಿದರು.
ಜಿಲ್ಲಾಽಕಾರಿ ನೂತನ ಸಭಾಭವನದಲ್ಲಿ ಮಂಗಳವಾರ 2026ನೇ ಸಾಲಿನ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ 2ನೇ ತ್ರೈಮಾಸಿಕ ಸಭೆ ಹಾಗೂ ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತಿ ಸಮಿತಿಯ ಪ್ರಸಕ್ತ ವರ್ಷದ 2ನೇ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದರು.
ದೌರ್ಜನ್ಯ ಕಾಯ್ದೆಯಡಿಯಲ್ಲಿ ದಾಖಲಾದ ಪ್ರಕರಣಗಳನ್ನು ಕೂಡಲೇ ಪರಿಹರಿಸಬೇಕು. ಅಲ್ಲದೇ ದಾಖಲಾದ ಪ್ರಕರಣಗಳಿಗೆ ಪರಿಹಾರದ ಮೊತ್ತವನ್ನು ಮಂಜೂರು ಮಾಡಿ, ವಿತರಿಸಬೇಕು. ಹು-ಧಾ ಮಹಾನಗರ ಪಾಲಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಕನಿಷ್ಠ ವೇತನ, ಇಎಸ್‌ಐ, ಪಿಎಫ್, ಆರೋಗ್ಯ ತಪಾಸಣೆ, ಸುರಕ್ಷತಾ ಪರಿಕರ, ಗುಣಮಟ್ಟದ ಉಪಹಾರ, ಗೃಹಭಾಗ್ಯ ಯೋಜನೆಯಡಿ ಮನೆ, ವಿಶ್ರಾಂತಿ ಗೃಹ, ಅನುಕಂಪದ ಆಧಾರದ ಉದ್ಯೋಗ, ಆರ್ಥಿಕ ಸೌಲಭ್ಯ ಹಾಗೂ ಜೀವವಿಮೆ ಸೌಲಭ್ಯ ನೀಡಲು ಅಽಕಾರಿಗಳು ಮುಂದಾಗಬೇಕು ಎಂದು ತಿಳಿಸಿದರು.
ಜಿಲ್ಲಾಽಕಾರಿ ಸ್ನೇಹಲ್ ಆರ್. ಮಾತನಾಡಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಕರಣಗಳನ್ನು ವಿಲೇವಾರಿ ಮಾಡಲು ಅಽಕಾರಿಗಳಿಗೆ ಸೂಚನೆ ನೀಡಲಾಗಿದೆ. ಪೋಕ್ಸೊ ಹಾಗೂ ದೌರ್ಜನ್ಯ ಕಾಯ್ದೆ ಅಡಿ ದಾಖಲಾದ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಅಽಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಪಂ ಸಿಇಒ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಗುಂಜನ್ ಆರ್ಯ, ಡಿಸಿಪಿ ರವೀಶ್ ಸಿ.ಆರ್. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ವೇದಿಕೆಯಲ್ಲಿದ್ದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಸೇರಿ ಜಿಲ್ಲಾಮಟ್ಟದ ಅಽಕಾರಿಗಳು, ವಕೀಲರು, ಸಮಾಜ ಮುಖಂಡರು ಉಪಸ್ಥಿತರಿದ್ದರು.