ಅಡುಗೆ ಅನಿಲ (LPG Leak) ಸೋರಿಕೆಯಾದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅಗ್ನಿ ಶಾಮಕ ದಳದ ಅಧಿಕಾರಿಗಳು ಹುಬ್ಬಳ್ಳಿ ಸಿದ್ಧಾರೂಢ ಮಠದ ಆವರಣದಲ್ಲಿ ಕಲ್ಪಿತ ಪ್ರದರ್ಶನದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. 
ಧಾರವಾಡ

ಅಡುಗೆ ಅನಿಲ ಸೋರಿಕೆ (LPG Leak) ಯಾಗದಂತೆ ಜಾಗೃತಿ ವಹಿಸಿ

ಸಂತೋಷ ವೈದ್ಯ
ಹುಬ್ಬಳ್ಳಿ: ಕಳೆದ ಎರಡು (LPG Leak) ವರ್ಷಗಳಿಂದ ನಗರ ಪ್ರದೇಶಗಳಲ್ಲಿ ಅಗ್ನಿ ಅವಘಡಗಳು ಹೆಚ್ಚಾಗುತ್ತಿವೆ. ಅದರಲ್ಲೂ ಚಳಿಗಾಲದಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಅವಘಡಗಳು ಸಂಭವಿಸುತ್ತಿವೆ. ಅಡುಗೆ ಅನಿಲ ಸೋರಿಕೆ ತಡೆಗಟ್ಟಲು ಪ್ರತಿಯೊಬ್ಬರು ಜಾಗೃತಿ ವಹಿಸಬೇಕು ಎಂದು ಧಾರವಾಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಮಠದ ಆವರಣದಲ್ಲಿ ಧಾರವಾಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಬಲವರ್ಧನೆ ಹಾಗೂ ಧಾರವಾಡ ಜಿಲ್ಲೆಯಲ್ಲಿ ಅಡುಗೆ ಅನಿಲ ಸೋರಿಕೆಯಿಂದ ದುರಂತಗಳನ್ನು ಕಡಿಮೆಗೊಳಿಸುವ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಏರ್ಪಡಿಸಿದ್ದ ಕಲ್ಪಿತ ಪ್ರದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರತಿ 4 ವರ್ಷಗಳಿಗೊಮ್ಮೆ ಅಡುಗೆ ಅನಿಲ ಸಿಲಿಂಡರ್ ಮತ್ತು ಒಲೆಗೆ ಸಂಪರ್ಕ ಕಲ್ಪಿಸುವ ಪೈಪ್ ಬದಲಾಯಿಸಬೇಕು. ಅಗ್ನಿ ಅವಘಡಗಳು ಸಂಭವಿಸಿದಾಗ ಗಾಯಾಳುಗಳಿಗೆ ಯಾವ ರೀತಿಯಲ್ಲಿ ಪ್ರಥಮ ಚಿಕಿತ್ಸೆ ನೀಡಬೇಕು ಎಂಬುದನ್ನು ಸಹ ತಿಳಿಯಪಡಿಸಲಾಗಿದೆ ಎಂದರು.
ಅಡುಗೆ ಅನಿಲ ಸೋರಿಕೆಯಾದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅಗ್ನಿ ಶಾಮಕ ದಳದ ಅಧಿಕಾರಿಗಳು ಕಲ್ಪಿತ ಪ್ರದರ್ಶನದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಜಿಪಂ ಸಿಇಒ ಭುವನೇಶ ಪಾಟೀಲ, ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಗರಿಮಾ ಪನ್ವಾರ, ಪೊ›ಬೇಷನರಿ ಐಎಎಸ್ ಅಧಿಕಾರಿ ರಿತೀಕಾ ವರ್ವ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ ಹೆಗ್ಗಳಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಎಂ.ಹೊನಕೇರಿ, ಹುಬ್ಬಳ್ಳಿ ಶಹರ ತಹಶೀಲ್ದಾರ ಮಹೇಶ ಗಸ್ತೆ, ಹುಬ್ಬಳ್ಳಿ ತಾಪಂ ಇಒ ಡಾ.ರಾಮಚಂದ್ರ ಹೊಸಮನಿ, ಬಾಳು ಮಗಜಿಕೊಂಡಿ, ಸರ್ವಮಂಗಳಾ ಪಾಠಕ, ಇತರರು ಇದ್ದರು.