ಕಾಮಗಾರಿ ವೇಳೆ ದುರಂತ mallappa jogin
- ರಾಜಕಾಲುವೆ ಒಳಚರಂಡಿ ಕಾಮಗಾರಿ ವೇಳೆ ದುರಂತ
ಹುಬ್ಬಳ್ಳಿ: ಇಲ್ಲಿಯ ದೇಶಪಾಂಡೆ ನಗರದ ಗುಜರಾತ್ ಭವನ mallappa jogin ಬಳಿಯ ರಾಜಕಾಲುವೆಗೆ ಸಂಪರ್ಕ ಕಲ್ಪಿಸುವ ಒಳಚರಂಡಿ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ.
ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದ ನಿವಾಸಿ ಮಲ್ಲಪ್ಪ ಜೋಗಿನ್ (41) ಮೃತ ಕಾರ್ಮಿಕ ಎಂದು ಗುರುತಿಸಲಾಗಿದೆ.
ಗುಂಡಿಯೊಳಗೆ ಇಳಿದು ಮಣ್ಣು ತೆಗೆಯುತ್ತಿದ್ದಾಗ ಸತತ ಸುರಿಯುತ್ತಿರುವ ಮಳೆಯಿಂದ ನೆನೆದಿದ್ದ ಮಣ್ಣು ಮಲ್ಲಪ್ಪ ಅವರ ಮೇಲೆ ಏಕಾಏಕಿ ಕುಸಿದಿದೆ. ಅದರಡಿ ಸಿಲುಕಿದ್ದ ಕಾರ್ಮಿಕನನ್ನು ಹೊರತೆಗೆಯಲು ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿದರೂ ಅವರನ್ನು ಬದುಕುಳಿಸಲು ಸಾಧ್ಯವಾಗಿಲ್ಲ. ಈ ಕಾಮಗಾರಿಯನ್ನು ಗುತ್ತಿಗೆದಾರ ಮಂಜುನಾಥ ಬೊಮ್ಮಶೆಟ್ಟಿ ನಡೆಸುತ್ತಿದ್ದರು ಎನ್ನಲಾಗಿದೆ.
ಸುರಕ್ಷತಾ ಕ್ರಮಗಳನ್ನು ಸಮರ್ಪಕವಾಗಿ ಪಾಲಿಸದೇ ಕಾಮಗಾರಿ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಘಟನೆಯ ಕುರಿತು ತನಿಖೆ ನಡೆಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಕಾರ್ಮಿಕನ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಪ್ರಕರಣ ದಾಖಲಿಸುವ ಕುರಿತು ಸಂಬಂಧಿಸಿದ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.