puja ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅಮರಗೋಳದಲ್ಲಿ ಏರ್ಪಡಿಸಿದ್ದ ಸಾಮೂಹಿಕ ಸಹಸ್ರ ಬಿಲ್ವಾರ್ಚನೆ ಪೂಜಾ ಕಾರ್ಯಕ್ರಮವನ್ನು ಶ್ರೀ ಬಸವಾನಂದ ಸ್ವಾಮೀಜಿ ಉದ್ಘಾಟಿಸಿದರು.
- ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು ನೀಡಿ
- ಮಹಿಳೆಯರ ಸ್ವಾವಲಂಬಿ ಜೀವನ
- ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಜನಪರ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ
ಸಾನ್ನಿಧ್ಯ ವಹಿಸಿದ್ದ ಗದಗ ಶಿವಾನಂದ ಮಠದ ಶ್ರೀ ಬಸವಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಮುಖ ಕಾರಣವಾಗಿದೆ ಎಂದರು.
ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು ನೀಡಿದರೇ ಅವರ ಜೀವನ ಉತ್ತಮವಾಗಿ ನಡೆಯುತ್ತದೆ. ಪ್ರತಿ ಮನೆಯಲ್ಲಿ ಸಂಸ್ಕಾರ ನೀಡುವ ಕೆಲಸವನ್ನು ಧಮಾಧಿಕಾರಿ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಮಾತನಾಡಿ, ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಅನೇಕ ರೀತಿಯ ಜನಪರ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ ಎಂದು ಹೇಳಿದರು.
ಸಾಮೂಹಿಕ ಸಹಸ್ರ ಬಿಲ್ವಾರ್ಚನೆ ಪೂಜಾ ಸಮಿತಿ ಅಧ್ಯಕ್ಷೆ ಶೋಭಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಯೋಜನೆ ಧಾರವಾಡ ಜಿಲ್ಲಾ ನಿರ್ದೇಶಕ ಹನುಮಂತ ನಾಯ್ಕ ಮಾತನಾಡಿದರು.
ಹಿರಿಯರಾದ ಬಸವರಾಜ ಹೆಬ್ಬಳ್ಳಿ, ನಾಗಪ್ಪ ಭೂಶೆಟ್ಟಿ, ನವನಗರ ವಲಯ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು, ತಾಲೂಕು ಕ್ಷೇತ್ರ ಯೋಜನಾಧಿಕಾರಿ ಲೀಲಾಮೂರ್ತಿ ಚೌಟೇರ, ನವನಗರ ವಲಯದ ಮೇಲ್ವಿಚಾರಕಿ ನೇತ್ರಾವತಿ ಗೌಡ, ಇತರರಿದ್ದರು.