minister ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ.
- ಬೆಳಗಾವಿ ಅಧಿವೇಶನದಲ್ಲಿ ಬಹಿರಂಗಪಡಿಸಿದ್ದೆ.
- ಹಿರಿಯ ಶಾಸಕರಿಂದ ಕಲಿಯುವುದು ಇರುತ್ತದೆ.
- ಜಿಲ್ಲಾವಾರು ಹೋರಾಟ ಮಾಡಲಾಗುವುದು.
ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಬಲೂನ್ನಂತೆ ಇರುವ ಶಾಸಕ ಮಹೇಶ ಟೆಂಗಿನಕಾಯಿ ಒಡೆದು ಹೋಗಲು ಬಹಳ ದಿನ ಬೇಕಾಗಿಲ್ಲ ಎಂಬ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಮಾತಿಗೆ ತಿರುಗೇಟು ನೀಡಿದರು.
ಗೃಹಲಕ್ಷ್ಮೀ ಯೋಜನೆಯ 5 ಸಾವಿರ ಕೋಟಿ ರೂ. ಫಲಾನುಭವಿಗಳ ಖಾತೆಗೆ ಜಮಾ ಆಗದಿರುವುದನ್ನು ಬೆಳಗಾವಿ ಅಧಿವೇಶನದಲ್ಲಿ ಬಹಿರಂಗಪಡಿಸಿದ್ದೆ. ಮೊನ್ನೆಯ ವಿಶೇಷ ಅಧಿವೇಶನದಲ್ಲಿಯೂ ಈ ಬಗ್ಗೆ ಪ್ರಸ್ತಾಪಿಸಿದ್ದೇನೆ ಎಂದರು.
2025ರ ಜನವರಿ ತಿಂಗಳಲ್ಲಿ ವಿತರಣೆಯಾಗಬೇಕಿದ್ದ ಅಕ್ಕಿ ಅಥವಾ 657 ಕೋಟಿ ರೂ. ಹಣ ಫಲಾನುಭವಿಗಳಿಗೆ ತಲುಪಿಲ್ಲ. ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯ ಯೋಜನೆಯಲ್ಲಿ ಫಲಾನುಭವಿಗಳಿಗೆ ಆದ ಅನ್ಯಾಯದ ವಿರುದ್ಧ ಮುಂದಿನ ದಿನಗಳಲ್ಲಿ ಜಿಲ್ಲಾವಾರು ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.
ಶಾಸಕ ಶಿವಲಿಂಗೇಗೌಡ ಕುರಿತು ಪ್ರತಿಕ್ರಿಯೆ ನೀಡಿ, ಹೊಸತಾಗಿ ಶಾಸಕರಾಗಿರುವವರು ಹಿರಿಯ ಶಾಸಕರಿಂದ ಕಲಿಯುವುದು ಇರುತ್ತದೆ. ಆದರೆ, ಶಾಸನ ಸಭೆಯಲ್ಲಿ ಅವಾಚ್ಯ ಶಬ್ಧ ಬಳಕೆಯಿಂದ ತಮ್ಮ ಮರ್ಯುದೆಯನ್ನು ನಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮತದಾರರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದರು.