social ಶಾಸಕ ಮಹೇಶ ಟೆಂಗಿನಕಾಯಿ ಅವರು ತಮ್ಮ ಜನ್ಮದಿನದ ಅಂಗವಾಗಿ ಹುಬ್ಬಳ್ಳಿಯಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು.
- ನೂರಾರು ಜನರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು.
- ಕೇಕ್ ತಿನ್ನಿಸಿ, ಶುಭಾಷಯ ಕೋರಿದರು.
- ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ನೋಂದಣಿಯ ಅಗತ್ಯತೆ ಇಲ್ಲ
ಹುಬ್ಬಳ್ಳಿ :
ಖಾಸಗಿ ಹೋಟೆಲ್ನಲ್ಲಿ ಜನ್ಮದಿನ ಆಚರಿಸಿಕೊಂಡ ಮಹೇಶ ಟೆಂಗಿನಕಾಯಿ ಅವರಿಗೆ ಮಹಾನಗರ ಪಾಲಿಕೆ ಸದಸ್ಯರು, ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಶುಭ ಹಾರೈಸಿದರು.
ನೂರಾರು ಜನರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ಶಾಸಕ ಮಹೇಶ ಟೆಂಗಿನಕಾಯಿ ಅವರಿಗೆ ಕೇಕ್ ತಿನ್ನಿಸಿ, ಶುಭಾಷಯ ಕೋರಿದರು.
ಸೆಂಟ್ರಲ್ ವಿಧಾನಸಭೆ ಕ್ಷೇತ್ರ ಅಷ್ಟೇ ಅಲ್ಲದೇ, ಇಡೀ ಧಾರವಾಡ ಹಾಗೂ ಇನ್ನಿತರ ಜಿಲ್ಲೆಗಳಿಂದಲೂ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹುಬ್ಬಳ್ಳಿಗೆ ಆಗಮಿಸಿ, ಜನ್ಮದಿನದ ಶುಭಾಷಯ ಕೋರಿದರು.
ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು.
ಗೃಹಲಕ್ಷ್ಮೀ ಗ್ಯಾರಂಟಿ ಯೋಜನೆಯಲ್ಲಿ ನಡೆದ ಭ್ರಷ್ಟಾಚಾರ ಮುಚ್ಚಿ ಹಾಕುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಯೋಜನೆ ಪರಿಷ್ಕರಣೆಯ ನೆಪವೊಡ್ಡುತ್ತಿದ್ದಾರೆ ಎಂದರು.
ಗೃಹಲಕ್ಷ್ಮೀ ಯೋಜನೆಯಲ್ಲಿ ನಡೆದಿರುವ ಅವ್ಯವಹಾರವಕ್ಕೆ ತೇಪೆ ಹಚ್ಚುವ ಕೆಲಸವನ್ನು ಸಿದ್ದರಾಮಯ್ಯ ಸರ್ಕಾರ ಮಾಡಿತ್ತು.
ಆದರೆ, ಇದೀಗ ಮುಖ್ಯಮಂತ್ರಿ ಹಾಗೂ ಸಂಬಂಧಿಸಿದ ಸಚಿವರು ಇಬ್ಬರೂ ಬದಲಾಗಿದ್ದಾರೆ. ಆಗಿರುವ ಅನ್ಯಾಯದ ಬಗ್ಗೆ ಜನರು ಯಾರನ್ನು ಕೇಳಬೇಕು ? ಮುಂಬರುವ ಅಧಿವೇಶನದಲ್ಲಿ ಈ ಕುರಿತು ಪ್ರಸ್ತಾಪಿಸಲಾಗುವುದು ಎಂದು ತಿಳಿಸಿದರು.
ಆರ್ಎಸ್ಎಸ್ ಬಗ್ಗೆ ಮೇಲಿಂದ ಮೇಲೆ ಮಾತನಾಡುತ್ತಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಡುವಿದ್ದಾಗ ಸಂಘದ ಕಚೇರಿ ಅಥವಾ ಶಾಖೆಗೆ ಭೇಟಿ ನೀಡಿ, ಅಲ್ಲೇ ಸ್ವಲ್ಪ ಕಾಲ ಕಳೆಯಲಿ. ಆವರಿಗೆ ಸಂಘದ ಬಗ್ಗೆ ಪರಿಚಯವಾಗುತ್ತದೆ. ಶತಮಾನ ಪೂರೈಸಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ನೋಂದಣಿಯ ಅಗತ್ಯತೆ ಇಲ್ಲ ಎಂದು ಹೇಳಿದರು.
ಮೇಯರ್ ಜ್ಯೋತಿ ಪಾಟೀಲ, ಉಪ ಮೇಯರ್ ಸಂತೋಷ ಚವ್ಹಾಣ, ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಪಾಲಿಕೆ ಸದಸ್ಯರಾದ ವೀರಣ್ಣ ಸವಡಿ, ರೂಪಾ ಶೆಟ್ಟಿ ಇತರರಿದ್ದರು.