- ಶಾಸಕ ಎಂ.ಆರ್. ಪಾಟೀಲ ಮಾಹಿತಿ
- ಕುಂದಗೋಳದ ಹರಭಟ್ಟ ಹೈಸ್ಕೂಲ್ ಮೈದಾನದಲ್ಲಿ ಆಯೋಜನೆ
ಕುಂದಗೋಳ: ನರೇಂದ್ರ ಮೋದಿ ಅವರ ಖೇಲೋ ಇಂಡಿಯಾ ಹಾಗೂ ಫಿಟ್ ಇಂಡಿಯಾ ಅಭಿಯಾನದ ಆಶಯದಂತೆ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮಹತ್ವಾಕಾಂಕ್ಷೆಯ ಧಾರವಾಡ ಸಂಸದ ಕ್ರೀಡಾ ಮಹೋತ್ಸವವನ್ನುMP Sports Festival ಡಿ. 25 ಮತ್ತು 26ರಂದು ಕುಂದಗೋಳ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಎಂ.ಆರ್. ಪಾಟೀಲ ಹೇಳಿದರು.
ಪಟ್ಟಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿರುವ ಕ್ರೀಡಾಕೂಟಕ್ಕೆ ಡಿ. 25ರಂದು ಬೆಳಗ್ಗೆ 10 ಗಂಟೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಚಾಲನೆ ನೀಡುವರು.
ಕುಂದಗೋಳದ ಹರಭಟ್ಟ ಹೈಸ್ಕೂಲ್ ಮೈದಾನದಲ್ಲಿ ಕ್ರೀಡಾ ಹಬ್ಬ ನಡೆಯಲಿದೆ.
ಕ್ರೀಡಾಕೂಟದಲ್ಲಿ ಕಬಡ್ಡಿ, ಖೋ-ಖೋ, ವಾಲಿಬಾಲ್ ಮಾತ್ರವಲ್ಲದೆ, 100 ಮೀಟರ್ ಮತ್ತು 800 ಮೀಟರ್ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ ಹಾಗೂ ಸಾಂಪ್ರದಾಯಿಕ ಕ್ರೀಡೆಯಾದ ಲಗೋರಿಯನ್ನು ಸೇರಿಸಲಾಗಿದೆ. ಕ್ಷೇತ್ರದ ಸಾರ್ವಜನಿಕರು ಹಾಗೂ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕ್ರೀಡಾಕೂಟ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಮೊಬೈಲ್ ಬಳಕೆ ಬಿಟ್ಟು ಮೈದಾನಕ್ಕಿಳಿಯಿರಿ
ಇಂದಿನ ಮೊಬೈಲ್ ಯುಗದಲ್ಲಿ ಮಕ್ಕಳು ಮತ್ತು ಯುವಕರು ದಿನವಿಡೀ ಮೊಬೈಲ್‌ಫೋನ್‌ಗಳಲ್ಲೇ ಮುಳುಗಿರುತ್ತಿದ್ದಾರೆ. ಇದನ್ನು ಬಿಟ್ಟು ಕ್ರೀಡಾಂಗಣಕ್ಕೆ ಬಂದು ಕ್ರೀಡೆಗಳಲ್ಲಿ ತೊಡಗಿಸಿಕೊಂಡರೆ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ.