mujagam prize ಡಾ. ಗಂಗಾಧರ ರಾಜಯೋಗೀಂದ್ರ ಸ್ವಾಮೀಜಿ 
ಧಾರವಾಡ

mujagam prize ಡಾ. ಗಂಗಾಧರ ರಾಜಯೋಗೀಂದ್ರ ಸ್ವಾಮೀಜಿ ಸ್ಮರಣೋತ್ಸವ

ಪ್ರಮುಖ ಮುಖ್ಯಾಂಶಗಳು

  • ಮೂಜಗಂ ಪ್ರಶಸ್ತಿ ಪ್ರದಾನ 26ರಂದು
  • ಶ್ರೀ ಅಭಿನವ ಸಿದ್ಧಾರೂಢ ಸ್ವಾಮೀಜಿಗೆ ಸಾಹಿತ್ಯ ಪ್ರಶಸ್ತಿ
ಹುಬ್ಬಳ್ಳಿ: mujagam prize ಇಲ್ಲಿಯ ಮೂರುಸಾವಿರ ಮಠ ವತಿಯಿಂದ ಲಿಂ. ಡಾ. ಗಂಗಾಧರ ರಾಜಯೋಗೀಂದ್ರ ಸ್ವಾಮೀಜಿ 23ನೇ ಪುಣ್ಯ ಸ್ಮರಣೋತ್ಸವ ಹಾಗೂ ಡಾ. ಮೂಜಗಂ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಮೇ 26ರಂದು ಬೆಳಗ್ಗೆ 11ಕ್ಕೆ ನಗರದ ಮೂರುಸಾವಿರ ಮಠ ಶಾಲೆ ಆವರಣದ ಸಭಾಭವನದಲ್ಲಿ ಏರ್ಪಡಿಸಲಾಗಿದೆ.
ಹುಬ್ಬಳ್ಳಿಯ ಶಾಂತಾಶ್ರಮದ ಶ್ರೀ ಸದ್ಗುರು ಅಭಿನವ ಸಿದ್ಧಾರೂಢ ಸ್ವಾಮೀಜಿಗೆ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಜಗದ್ಗುರು ಡಾ. ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.
ಎರಡೆತ್ತಿನಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಹುಕ್ಕೇರಿಮಠದ ಡಾ. ಸದಾಶಿವ ಸ್ವಾಮೀಜಿ, ರುದ್ರಾಮಠದ ಶ್ರೀ ಬಸವಲಿಂಗ ಸ್ವಾಮೀಜಿ, ಅಕ್ಕಿಆಲೂರ ವಿರಕ್ತಮಠದ ಶ್ರೀ ಶಿವಬಸವ ಸ್ವಾಮೀಜಿ.
ರಾಯನಾಳದ ಶ್ರೀ ಅಭಿನವ ರೇವಣಸಿದ್ದೇಶ್ವರ ಸ್ವಾಮೀಜಿ, ಕಲಬುಗಿರ್ಮಠದ ಶ್ರೀ ಚರಲಿಂಗ ಸ್ವಾಮೀಜಿ ಸಮ್ಮುಖ ವಹಿಸುವರು. ಸಭಾಪತಿ ಬಸವರಾಜ ಹೊರಟ್ಟಿ ಅಧ್ಯಕ್ಷತೆ ವಹಿಸುವರು.