ವಿಮಾನ ನಿಲ್ದಾಣಗಳಿಗೆ ಕನ್ನಡದ muttannavara protestಐವರ ಮಹನೀಯರ ಹೆಸರಿಡಬೇಕು ಎಂದು ಒತ್ತಾಯಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿ ಧಾರವಾಡ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಹುಬ್ಬಳ್ಳಿಯಲ್ಲಿ ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು. 
ಧಾರವಾಡ

muttannavara protest ವಿಮಾನ ನಿಲ್ದಾಣಗಳಿಗೆ ಮಹನೀಯರ ಹೆಸರಿಡಿ

ಹುಬ್ಬಳ್ಳಿ: ಕಳಸಾ-ಬಂಡೂರಿ ಮಹದಾಯಿ ಯೋಜನೆ ಜಾರಿಗೊಳಿಸಬೇಕು muttannavara protest ಹಾಗೂ ರಾಜ್ಯದ 5 ವಿಮಾನ ನಿಲ್ದಾಣಗಳಿಗೆ ಕನ್ನಡದ ಐವರ ಮಹನೀಯರ ಹೆಸರಿಡಬೇಕು ಎಂದು ಒತ್ತಾಯಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿ ಧಾರವಾಡ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ನಗರದಲ್ಲಿ ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕಳೆದ 45 ವರ್ಷದಿಂದ ಕಳಸಾ-ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಹೋರಾಟಗಳನ್ನು ಮಾಡಲಾಗುತ್ತಿದೆ. ಇದರಲ್ಲಿ ಬರೀ ರಾಜಕಾರಣ ಮಾಡಲಾಗುತ್ತಿದೆಯೇ ಹೊರತು ರೈತರ ಹಿತ ಕಾಪಾಡುತ್ತಿಲ್ಲ. ಕೇಂದ್ರ ಮಂತ್ರಿಗಳಾದ ಸಿ.ಆರ್. ಪಾಟೀಲ, ರಾಜಭೂಷಣ ಚೌಧರಿ ಹಾಗೂ ವಿ. ಸೋಮಣ್ಣ ಅವರು ತಮ್ಮ ಇಚ್ಛಾಶಕ್ತಿ ಪ್ರದರ್ಶಿಸುತ್ತಿಲ್ಲ. ಕೂಡಲೇ ಪ್ರಧಾನ ಮಂತ್ರಿಗಳು ಇವರ ರಾಜೀನಾಮೆಯನ್ನು ಪಡೆಯಬೇಕು ಎಂದು ಆಗ್ರಹಿಸಿದರು.
ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ಚನ್ನಮ್ಮ, ವಿಜಯಪುರದ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರ, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹಾಗೂ ಬೆಂಗಳೂರಿನ ಇನ್ನೊಂದು ನಿಲ್ದಾಣಕ್ಕೆ ಡಾ. ರಾಜಕುಮಾರ ಹೆಸರಿಡಬೇಕು ಎಂದು ಆಗ್ರಹಿಸಿದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಈ ವಿಷಯಗಳಿಗೆ ಸಂಬಂಧಿಸಿದಂತೆ ತುರ್ತು ಅಧಿಕಾರಿಗಳ ಸಭೆ ನಡೆಸಬೇಕು. ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದ ಮನವಿಯನ್ನು ನೀಡಲಾಯಿತು.
ಇದಕ್ಕೂ ಮೊದಲು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಚಕ್ಕಡಿ ಮೆರವಣಿಗೆ ಮೂಲಕ ಚಿಟಗುಪ್ಪಿ ಆಸ್ಪತ್ರೆ ಬಳಿಯ ಸಂಸದರ ಕಚೇರಿ ಮುಂದೆ ಆಗಮಿಸಿ ಪ್ರತಿಭಟನೆ ನಡೆಸಿದರು.
ಸಮಿತಿ ಅಧ್ಯಕ್ಷ ಶಿವಾನಂದ ಮುತ್ತಣ್ಣವರ, ಪ್ರಮುಖರಾದ ಅಡಿವೆಪ್ಪ ಶಿವಳ್ಳಿ, ನೂಲ್ವಿ ಚಂದ್ರಣ್ಣ ಗೋಕಾಕ, ಮಲ್ಲಿಕಾರ್ಜುನ ಕುನ್ನೂರ, ಕಪರಪ್ಪ ಗೊರಗುದ್ಲಿ, ಮಲ್ಲಿಕಾರ್ಜುನ ತಾಲೂರ, ಯಲ್ಲಪ್ಪ ಕುಂದಗೋಳ, ಬಸವರಾಜ ಅಗಸಿಮನಿ, ಚಂದ್ರಣ್ಣ ಕುರುಬರ ಇತರರು ಪ್ರತಿಭಟನೆಯಲ್ಲಿದ್ದರು.