ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಎನ್.ವಿ. ವಿಜಯ 
ಧಾರವಾಡ

ರಾಷ್ಟ್ರೀಯ ಲೋಕ ಅದಾಲತ್ ಜು. 11ರಂದು

ಧಾರವಾಡ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಽಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು, ವ್ಯಾಜ್ಯ ಪೂರ್ವ ಪ್ರಕರಣಗಳು ಹಾಗೂ ರಾಜೀ ಆಗಬಹುದಾದ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸುವ ಉದ್ದೇಶದಿಂದ ಜು. 11ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರದ ಅಧ್ಯಕ್ಷರೂ ಆಗಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್.ವಿ. ವಿಜಯ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯ ಸರ್ಕಾರ ಜೂ. 4ರಂದು ಹೊರಡಿಸಿದ ಆದೇಶದಂತೆ 2026ರ ಮೇ ಕ್ಕಿಂತ ಮೊದಲು ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತ ಹಾಗೂ ಸಾರಿಗೆ ಇಲಾಖೆಯಲ್ಲಿ 1991ರಿಂದ 2022ರ ಅವಽಯಲ್ಲಿ ದಾಖಲಾಗಿರುವ ಬಾಕಿ ದಂಡದ ಪ್ರಕರಣಗಳ ಮೊತ್ತದಲ್ಲಿ ಶೇ. 50ರಷ್ಟು ರಿಯಾಯಿತಿ ನೀಡಲಾಗಿದೆ ಎಂದರು.
ಈ ರಿಯಾಯಿತಿ ಪಡೆಯಲು ಜೂ. 21ರಿಂದ ಜು. 10ರವರೆಗೆ 20 ದಿನಗಳ ಕಾಲಾವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಂಡು ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಅಲ್ಲಪ್ಪ ಬಡಿಗೇರ, ಸಹಾಯಕ ಪೊಲೀಸ್ ಆಯುಕ್ತ ವಿರೇಶ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ ಮಲ್ನಾಡ ಸುದ್ದಿಗೋಷ್ಠಿಯಲ್ಲಿದ್ದರು.