ಧಾರವಾಡ ಜಿಲ್ಲಾಧಿಕಾರಿ ಆರ್ ‌ ಸ್ನೇಹಲ್ ಸಭೆ 
ಧಾರವಾಡ

ಪಲ್ಸ್ ಪೋಲಿಯೋದಿಂದ ಯಾವ ಮಗುವೂ ವಂಚಿತ ಆಗಬಾರದು

ಧಾರವಾಡ: ಜಿಲ್ಲೆಯಲ್ಲಿ ಜೂನ್ 28ರಿಂದ ಜುಲೈ 1ರವರಗೆ ಜಿಲ್ಲೆಯಲ್ಲಿ ಹಮ್ಮಿಕೊಳ್ಳುವ ರಾಷ್ಟ್ರೀಯ ಪಲ್ಸ್ ಪೊಲೀಯೋ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಬೇಕು. ಜಿರೋ ದಿಂದ ಐದು ವರ್ಷದೊಳಗಿನ ಯಾವ ಮಗುವು ಪೋಲಿಲೋ ಹನಿಯಿಂದ ಹೊರಗುಳಿಯದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಽಕಾರಿ ಕಚೇರಿಯಲ್ಲಿ ಜಿಲ್ಲಾಮಟ್ಟದ ಅಂತರ್ ಇಲಾಖಾ ಸಮನ್ವಯ ಸಮಿತಿಯ ಜಿಲ್ಲಾ ಕಾರ್ಯಪಡೆ ಹಾಗೂ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯಾದ್ಯಂತ 0-5 ವರ್ಷದ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕು. ಜೂ. 28ರಂದು ಬೂತ್ ಮಟ್ಟದಲ್ಲಿ ಹಾಗೂ ಜೂ. 29 ಮತ್ತು 30ರಂದು ಎರಡು ದಿನಗಳ ಕಾಲ ಗ್ರಾಮೀಣ ಪ್ರದೇಶಗಳಲ್ಲಿ, ಜೂ. 29ರಿಂದ ಜುಲೈ 1ರವರೆಗೆ ನಗರ ಪ್ರದೇಶಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ಕಾರ್ಯಕರ್ತರು 0-5 ವರ್ಷದ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಿದ್ದಾರೆ. ಸಾರ್ವಜನಿಕರು ತಮ್ಮ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ 5 ವರ್ಷದೊಳಗಿನ 2,07,837 ಮಕ್ಕಳಿದ್ದಾರೆ. 891 ಒಟ್ಟು ಲಸಿಕಾ ಕೇಂದ್ರಗಳು ಸ್ಥಾಪಿಸಲಾಗಿದೆ. 92 ಟ್ರಾಂಜಿಟ್ ತಂಡಗಳು, 57 ಮೊಬೈಲ್ ತಂಡಗಳು ಕಾರ್ಯ ನಿರ್ವಹಿಸಲಿವೆ. ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ 3,829 ವ್ಯಾಕ್ಸಿನೇಟರ್‌ಗಳು ಹಾಗೂ 214 ಮೇಲ್ವಿಚಾರಕರು ಭಾಗವಹಿಸಲಿದ್ದಾರೆ. ಜಿಲ್ಲೆಯ ಒಟ್ಟು 4,28,540 ಮನೆಗಳಿಗೆ ಆರೋಗ್ಯ ಕಾರ್ಯಕರ್ತರು ಭೇಟಿ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಡಿಎಚ್‌ಒ ಡಾ. ಸತೀಶ್ ಹೊನಕೇರಿ, ಜಿಲ್ಲಾ ಆರ್‌ಸಿಎಚ್‌ಓ ಡಾ. ಸುಜಾತಾ ಹಸವೀಮಠ, ಜಿಪಂ ಸಿಇಒ ಭುವನೇಶ ಪಾಟೀಲ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಅಜೀಜ ದೇಸಾಯಿ ಸೇರಿ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮ ಅಽಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಮತ್ತು ಶಿಕ್ಷಣ, ಆರ್‌ಡಿಪಿಆರ್, ಮಹಿಳಾ ಮತ್ತು ಮಕ್ಕಳ್ಳ ಅಭಿವೃದ್ಧಿ ಇತರ ಇಲಾಖೆ ಅಧಿಕಾರಿಗಳು ಇದ್ದರು.