ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದಲ್ಲಿ ಶಾಸಕ ವಿನಯ ಕುಲಕರ್ಣಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದರು.
ಧಾರವಾಡ: ಹಲವಾರು ವರ್ಷಗಳಿಂದ ಹಕ್ಕುಪತ್ರಗಳಿಗಾಗಿ ಎಲ್ಲರೂ ಒಟ್ಟುಗೂಡಿ ಮಾಡಿದ ನಿರಂತರ ಹೋರಾಟಕ್ಕೆ ಯಶ್ವಸ್ಸು ಸಿಕ್ಕಿದೆ. ಅ-ಧಿಕಾರ ಎಂದಿಗೂ ಶಾಶ್ವತವಲ್ಲ, ನಾವು ಮಾಡುವ ಕೆಲಸಗಳು ಮಾತ್ರ ಶಾಶ್ವತ. ಯೋಜನೆಗಳನ್ನು ರೂಪಿಸುವುದಕ್ಕಿಂತ ಅದನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವುದು ಮುಖ್ಯ ಎಂದು ಶಾಸಕ ವಿನಯ ಕುಲಕರ್ಣಿ ಹೇಳಿದರು.
ತಾಲೂಕಿನ ಅಮ್ಮಿನಭಾವಿ ಗ್ರಾಮದ ವಾಲ್ಮೀಕಿ ಸಭಾಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅನಧಿಕೃತವಾಗಿ ವಾಸದ ಮನೆ ಕಟ್ಟಿಕೊಂಡಿದ್ದ 444 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು.
ಅನೇಕ ಗ್ರಾಮಗಳಲ್ಲಿ ಸುಮಾರು 40ರಿಂದ 50 ವರ್ಷಗಳಿಂದ ಗೈರಾಣ ಜಮೀನಿನಲ್ಲಿ ಅನಧಿಕೃತವಾಗಿ ಮನೆಗಳನ್ನು ಕಟ್ಟಿಕೊಂಡು ವಾಸವಿರುತ್ತಾರೆ. ಅಂಥವರಿಗೆ ಅಧಿಕೃತ ದಾಖಲೆಗಳನ್ನು ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ. 94*ಡಿ ಅಡಿ ಉಪಗ್ರಾಮವನ್ನಾಗಿ ರಚಿಸಿ ಅರ್ಹ ಲಾನುಭವಿಗಳಿಗೆ ಸರ್ಕಾರದ ವತಿಯಿಂದ ಹಕ್ಕುಪತ್ರ ನೀಡಲಾಗುತ್ತಿದೆ ಎಂದರು.
ತಹಸೀಲ್ದಾರ್ ಸಚ್ಚಿದಾನಂದ ಕುಚನೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವಲೀಲಾ ವಿನಯ ಕುಲಕರ್ಣಿ, ತಾ.ಪಂ. ಇಒ ಗಂಗಾಧರ ಕಂದಕೂರ, ಗ್ಯಾರಂಟಿ ಯೋಜನೆಯ ಜಿಲ್ಲಾ ಪ್ರಾಧಿಕಾರದ ಸದಸ್ಯ ಅರವಿಂದ ಏಗನಗೌಡರ, ಈಶ್ವರ ಶಿವಳ್ಳಿ, ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.