law ಹುಬ್ಬಳ್ಳಿಯ ಡಾ. ಆರ್.ಬಿ. ಪಾಟೀಲ ಮಹೇಶ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾನೂನು ಅರಿವು - ನೆರವು ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಅಲ್ಲಪ್ಪ ಬಡಿಗೇರ, ಡಾ. ಕೆ.ಎಸ್. ಸಮೀರ ಕುಮಾರ, ಎಸ್.ಎಸ್. ಪಾಟೀಲ, ವಿಜಯಕುಮಾರ ಪಾಟೀಲ ಹಾಗೂ ಇತರರು ಪಾಲ್ಗೊಂಡಿದ್ದರು.  
ಧಾರವಾಡ

ಕಾನೂನು ಪಾಲನೆ ಪ್ರತಿಯೊಬ್ಬರ ಕರ್ತವ್ಯ law

ಪ್ರಮುಖ ಮುಖ್ಯಾಂಶಗಳು

  • ಉತ್ತಮ ಭವಿಷ್ಯ ರೂಢಿಸಿಕೊಳ್ಳಬೇಕು.
  • ಮೂಲಭೂತ ಹಕ್ಕುಗಳನ್ನುಪಾಲಿಸುವುದು ನಮ್ಮ ಕರ್ತವ್ಯವಾಗಿದೆ.
  • ಕಾನೂನು ಅರಿವು - ನೆರವು ಕಾರ್ಯಕ್ರಮ.
ಹುಬ್ಬಳ್ಳಿ :
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಡಾ. ಆರ್. ಬಿ. ಪಾಟೀಲ ಮಹೇಶ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾನೂನು ಅರಿವು - ನೆರವು ಕಾರ್ಯಕ್ರಮದಲ್ಲಿ ಅವರು ಅತಿಥಿಯಾಗಿ ಮಾತನಾಡಿದರು.
ಮಾನವ ಹಕ್ಕುಗಳು ಹಾಗೂ ಮೂಲಭೂತ ಹಕ್ಕುಗಳನ್ನು ಭಾರತಿಯ ನಾಗರಿಕರಾಗಿ ಪಾಲಿಸುವುದು ನಮ್ಮ ಪ್ರಮುಖ ಕರ್ತವ್ಯವಾಗಿದೆ ಎಂದರು.
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಕಾರ್ಯದರ್ಶಿ ಡಾ. ಕೆ.ಎಸ್. ಸಮೀರ ಕುಮಾರ ಮಾತನಾಡಿ, ವಿದ್ಯಾರ್ಥಿಗಳು ತಂದೆ, ತಾಯಿ ಮತ್ತು ಪಾಲಕರ ಮಾರ್ಗದರ್ಶನದಲ್ಲಿ ಜೀವನ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳು ಯಾವುದೇ ತರಹದ ಕೆಟ್ಟ ಹವ್ಯಾಸಗಳಿಗೊಳಗಾಗದೆ ಉತ್ತಮ ಭವಿಷ್ಯ ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.
ಎನ್​ಎಲ್​ಇ ಸಂಸ್ಥೆಯ ಶೈಕ್ಷಣಿಕ ಸಂಯೋಜಕರಾದ ವಿಜಯಕುಮಾರ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.
ಕಾನೂನು ನೆರವು ರಕ್ಷಣಾ ಸಲಹೆಗಾರರಾದ ಎಸ್.ಎಸ್. ಪಾಟೀಲ, ಮಯೂರ ನಾಟೇಕರ, ಪ್ರಾಂಶುಪಾಲ ರಾಮ ಮೋಹನ ಎಚ್. ಕೆ., ಉಪ ಪ್ರಾಂಶುಪಾಲ ರಮೇಶ ಹೊಂಬಾಳೆ ಹಾಗೂ ಇತರರಿದ್ದರು.
ನವಮಿ ಐ. ಸಿ. ಪ್ರಾರ್ಥಿಸಿದರು. ನೀಲ್ ಪ್ರತಾಪನ್ ನಿರೂಪಿಸಿ, ವಂದಿಸಿದರು.