kayak gram ಹುಬ್ಬಳ್ಳಿ ತಾಲೂಕಿನ ದೇವರಗುಡಿಹಾಳ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ಕಾಯಕ ಗ್ರಾಮ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಪಂ ಸಿಇಒ ಭುವನೇಶ ಪಾಟೀಲ ಪರಿಶೀಲಿಸಿದರು. ರಾಮಚಂದ್ರ ಹೊಸಮನಿ. ಪಿಡಿಒ ಎಚ್​.ಎಫ್​. ಕಲಹಾಳ, ಅಧ್ಯಕ್ಷೆ ಖಾತುನಬಿ ಲಾಡಸಾಬನವರ, ಉಪಾಧ್ಯಕ್ಷೆ ಫಕ್ಕೀರವ್ವ ಮಾದರ ಇತರರಿದ್ದರು. 
ಧಾರವಾಡ

kayak gram ಕಾಯಕ ಗ್ರಾಮ ಅಧಿಕಾರಿಗಳಿಂದ ಪರಿಶೀಲನೆ

ಹುಬ್ಬಳ್ಳಿ: kayak gram ತಾಲೂಕಿನ ದೇವರಗುಡಿಹಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳನ್ನು ಮಾದರಿಯಾಗಿ ರೂಪಿಸಲು ಕ್ರಮ ವಹಿಸಬೇಕು ಎಂದು ಧಾರವಾಡ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕಿನ ದೇವರಗುಡಿಹಾಳ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆ ಹಾಗೂ ಕಾಯಕ ಗ್ರಾಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇದಕ್ಕಾಗಿ ಅಗತ್ಯವಿರುವ ಶಿಕ್ಷಣ, ಆರೋಗ್ಯ, ಮೂಲ ಸೌಕರ್ಯ ಹಾಗೂ ಪರಿಸರ ರಕ್ಷಣೆ ಸೇರಿ ಎಲ್ಲ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಬೇಕು. ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಜಾರಿಯಾಗಿ ಪ್ರತಿಯೊಬ್ಬರಿಗೂ ಸೌಲಭ್ಯಗಳು ತಲುಪಬೇಕು, ಈ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಆಸಕ್ತಿ ವಹಿಸಿ ಕೆಲಸ ನಿರ್ವಹಿಸಬೇಕು ಎಂದರು.
ಗ್ರಾಮ ಪಂಚಾಯತಿಯ ಯೋಜನೆಗಳ ಮಾಹಿತಿಯನ್ನು ಕಡ್ಡಾಯವಾಗಿ ತಂತ್ರಾಂಶದಡಿ ನಮೂದಿಸಬೇಕು, ದೇವರಗುಡಿಹಾಳದಲ್ಲಿ ರಾಜ್ಯ ಸರ್ಕಾರದ ಸಮಗ್ರ ಕಾಯಕ ಗ್ರಾಮ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ, ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು.