ಅಪಘಾತದಲ್ಲಿ ನಜ್ಜುಗುಜ್ಜಾದ ಕಾರು. 
ಧಾರವಾಡ

ಕಾರು- ಲಾರಿ ಅಪಘಾತದಲ್ಲಿ ಓರ್ವ ಸಾವು

ಮಂಜುನಾಥ ಅಂಗಡಿ
ಧಾರವಾಡ: ಕಾರು ಹಾಗೂ ಲಾರಿ ಮಧ್ಯೆ ಮುಖಾಮುಖಿ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಧಾರವಾಡ ಬೈಪಾಸ್​ ಬಳಿ ಇರುವ ಹಳಿಯಾಳ ಸೇತುವೆ ಬಳಿ ನಡೆದಿದೆ.
ಕಾರ್​ನಲ್ಲಿದ್ದ ತಮಿಳುನಾಡು ಮೂಲದ ಮುತ್ತುಕುಮಾರ್​ ಸಂಗವೇಲ್​ (50) ಅಪಘಾತದಲ್ಲಿ ಮೃತಪಟ್ಟಿದ್ದು, ಸೆಲ್ವಂ (41) ಹಾಗೂ ಸೆಂಥಿಲ್​ (48) ಎಂಬುವವರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತದೇಹವನ್ನು ಧಾರವಾಡ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕೆಎಂಸಿಆರ್​ಐ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.