parasada abbayya ಪ್ರಸಾದ ಅಬ್ಬಯ್ಯ
ಹುಬ್ಬಳ್ಳಿ: ಎರಡನೇ ಪಟ್ಟಿ ಜೂ. 20ರ ನಂತರ ಬಿಡುಗಡೆಯಾಗುವ ಸಾಧ್ಯತೆ ಇದ್ದು, ನನಗೆ ನೂರಕ್ಕೆ ನೂರರಷ್ಟು ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಶಾಸಕ parasada abbayya ಪ್ರಸಾದ ಅಬ್ಬಯ್ಯ ಭವಿಷ್ಯ ನುಡಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂವತ್ತು ವರ್ಷದಿಂದ ದಲಿತರಿಗೆ ಈ ಭಾಗದಲ್ಲಿ ಮಂತ್ರಿ ಸ್ಥಾನ ಸಿಕ್ಕಿಲ್ಲ. ಹೀಗಾಗಿ ಈ ಭಾಗಕ್ಕೆ ಪ್ರಾತಿನಿಧ್ಯ ನೀಡಬೇಕು ಎಂದು ಹೈಕಮಾಂಡ್‌ಗೆ ಮನವಿ ಮಾಡಿದ್ದೇನೆ. ಮತ್ತೊಮ್ಮೆ ಹೈಕಮಾಂಡ್‌ಗೆ ಭೇಟಿಯಾಗಿ ವಿನಂತಿಸುತ್ತೇನೆ ಎಂದರು.
ಸ್ಥಳೀಯರಿಗೆ ಮಂತ್ರಿ ಸ್ಥಾನ ನೀಡಿದರೆ, ಜಿಲ್ಲೆಯ ಅಭಿವೃದ್ಧಿಗೆ ಅನುಕೂಲವಾಗಲಿದೆ. ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ತಳಮಟ್ಟದಲ್ಲಿ ಬೆಳೆಯಲು ಅನುಕೂಲವಾಗುತ್ತದೆ. ಬರೀ ದಕ್ಷಿಣ ಭಾಗದವರಿಗಷ್ಟೇ ಅಲ್ಲ ಉತ್ತರ ಕರ್ನಾಟಕಕ್ಕೂ ಅವಕಾಶ ನೀಡುವಂತೆ ಮನವಿ ಮಾಡಿದ್ದೇನೆ. ಸಚಿವ ಸಂಪುಟದಲ್ಲಿ ಹೊಸ ಮುಖಗಳಿಗೆ ಮಣೆ ಹಾಕುತ್ತೇವೆ ಎಂದು ನಾಯಕರು ಹೇಳಿದ್ದರು. ಅರವತ್ತು ವರ್ಷದೊಳಗಿನವರಿಗೆ ಮಂತ್ರಿ ಸ್ಥಾನ ನೀಡುವ ಚಿಂತನೆ ನಡೆದಿದೆ ಎಂದು ವಿವರಿಸಿದರು.