actively ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಿದ್ದ ಸೆಂಟ್ರಲ್ ಕ್ಷೇತ್ರದ ಸಂಘಟನಾ ಸಭೆಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿದರು. 
ಧಾರವಾಡ

ಎಸ್​ಐಆರ್​ನಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ actively

ಆನಂದಕುಮಾರ ಅಂಗಡಿ

ಪ್ರಮುಖ ಮುಖ್ಯಾಂಶಗಳು

  • ಸೆಂಟ್ರಲ್ ಕ್ಷೇತ್ರದಲ್ಲಿ ಪ್ರಶಿಕ್ಷಣ ವರ್ಗಗಳು ಮುಕ್ತಾಯಗೊಂಡಿವೆ.
  • ಪ್ರತಿಯೊಬ್ಬರೂ ಪಕ್ಷ ನಿಷ್ಠೆಯಿಂದ ಕೆಲಸ ಮಾಡಬೇಕು.
  • ಎನ್​ಡಿಎ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಬೇಕು
ಹುಬ್ಬಳ್ಳಿ:
ಇಲ್ಲಿನ ಅರವಿಂದ ನಗರದ ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಿದ್ದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಸಂಘಟನಾ ಸಭೆಯಲ್ಲಿ ಅವರು ಮಾತನಾಡಿದರು.
ಸೆಂಟ್ರಲ್ ಕ್ಷೇತ್ರದಲ್ಲಿ ಈಗಾಗಲೇ ಪ್ರಶಿಕ್ಷಣ ವರ್ಗಗಳು ಮುಕ್ತಾಯಗೊಂಡಿವೆ. ಎಲ್ಲ ಅಪೇಕ್ಷಿತರು ಭಾಗವಹಿಸಿ ಎರಡು ದಿನ ಶಿಬಿರದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲಾಗಿದೆ ಎಂದು ಹೇಳಿದರು.
ಪಕ್ಷದಲ್ಲಿ ಸಂಘಟನೆಯ ಕಾರ್ಯ ಮುಖ್ಯ. ನಾವೆಲ್ಲ ಪಕ್ಷ ಸಂಘಟನೆಯಿಂದ ಈ ಮಟ್ಟಕ್ಕೆ ಬೆಳೆದವರು. ಪ್ರತಿಯೊಬ್ಬರೂ ಪಕ್ಷ ನಿಷ್ಠೆಯಿಂದ ಕೆಲಸ ಮಾಡಬೇಕು.
ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಬೇಕು ಎಂದರು.
ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ರಾಜು ಕಾಳೆ ಅಧ್ಯಕ್ಷತೆ ವಹಿಸಿದ್ದರು. ಉಪ ಮೇಯರ್ ಸಂತೋಷ ಚವ್ಹಾಣ, ಕ್ಷೇತ್ರದ ಬಿ ಎಲ್​ಎ ಪ್ರಶಾಂತ ಜಾಧವ, ರಾಮನಗೌಡ ಶೆಟ್ಟನಗೌಡರ, ಪಾಲಿಕೆ ಸದಸ್ಯರಾದ ಮಲ್ಲಿಕಾರ್ಜುನ ಗುಂಡೂರ ಹಾಗೂ ಇತರರಿದ್ದರು.