Perform ರೋಜಗಾರ ಮೇಳದ ಅಂಗವಾಗಿ ಹುಬ್ಬಳ್ಳಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ನೇಮಕಗೊಂಡವರಿಗೆ ಸಚಿವ ಪ್ರಲ್ಹಾದ ಜೋಶಿ ನೇಮಕಾತಿ ಪತ್ರ ವಿತರಿಸಿದರು. 
ಧಾರವಾಡ

ಸಮರ್ಪಣಾಭಾವದಿಂದ ಕರ್ತವ್ಯ ನಿರ್ವಹಿಸಿ Perform

ಆನಂದಕುಮಾರ ಅಂಗಡಿ

ಪ್ರಮುಖ ಮುಖ್ಯಾಂಶಗಳು

  • ರೋಜಗಾರ ಮೇಳದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಲಹೆ
ಹುಬ್ಬಳ್ಳಿ :
Perform ಭಾರತ ಸರ್ಕಾರವು ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತ ನೇಮಕಾತಿ ಪ್ರಕ್ರಿಯೆಗೆ ಆದ್ಯತೆ ನೀಡುತ್ತಿದೆ . ವಿಕಸಿತ ಭಾರತ ನಿಮಾಣದಲ್ಲಿ ಪ್ರತಿಯೊಬ್ಬರ ಪಾತ್ರ ಮಹತ್ವದ್ದಾಗಿದ್ದು, ಸರ್ಕಾರಿ ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳು ಸಾರ್ವಜನಿಕ ಸೇವೆಯಲ್ಲಿ ನಿಷ್ಠೆ, ಪ್ರಾಮಾಣಿಕತೆ ಹಾಗೂ ಸಮರ್ಪಣಾಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ದೇಶದಾದ್ಯಂತ ಶನಿವಾರ ಆಯೋಜಿಸಿದ್ದ 19ನೇ ರೋಜಗಾರ ಮೇಳದ ಅಂಗವಾಗಿ ಇಲ್ಲಿನ ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳಿಗೆ ನೇಮಗೊಂಡವರಿಗೆ ಉದ್ಯೋಗ ನೇಮಕಾತಿ ಪತ್ರ ವಿತರಿಸಿ, ಅವರು ಮಾತನಾಡಿದರು.
ಹೊಸದಾಗಿ ಅಧಿಕಾರಿ, ಸಿಬ್ಬಂದಿ ಆಗಿ ನೇಮಕ ಆಗುತ್ತಿರುವವರು ಸಾರ್ವಜನಿಕರೊಂದಿಗೆ ಉತ್ತಮ ವರ್ತನೆ ಹೊಂದಬೇಕು. ಜನರ ಸಮಸ್ಯೆಗಳಿಗೆ ಸ್ಪಂಧಿಸಬೇಕು. ಅಹಂಕಾರ, ಭ್ರಷ್ಟಾಚಾರದಿಂದ ದೂರ ಇರಬೇಕು ಎಂದು ಸಲಹೆ ನೀಡಿದರು.
ರೈಲ್ವೆ, ಬ್ಯಾಂಕ್ ಸೇರಿದಂತೆ ಇನ್ನಿತರ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡುವಂತೆ ಪ್ರಧಾನಿ ಸೂಚನೆ ನೀಡಿದ್ದಾರೆ. ಯಾವುದಾದರೂ ಹುದ್ದೆಗಳ ಅಗತ್ಯ ಇರದೇ ಇದ್ದರೆ ಅವುಗಳನ್ನು ರದ್ದುಗೊಳಿಸುವಂತೆಯೂ ಸೂಚಿಸಿದ್ದಾರೆ. ಖಾಲಿ ಹುದ್ದೆಗಳ ನೇಮಕ ಪ್ರಕ್ರಿಯೆಯನ್ನು ಪ್ರಧಾನಿ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ತಿಳಿಸಿದರು.
ಪ್ರಸ್ತುತ ಜಾಗತಿಕ ಸವಾಲಿನ ಪರಿಸ್ಥಿತಿಯ ನಡುವೆಯೂ ಭಾರತವು ಆರ್ಥಿಕವಾಗಿ ಸ್ಥಿರತೆಯನ್ನು ಕಾಯ್ದುಕೊಂಡಿದೆ
ಭಾರತೀಯ ರೈಲ್ವೆ ವಿಶ್ವಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಶೇ.99 ರಷ್ಟು ವಿದ್ಯುದ್ದೀಕರಣ ಸಾಧಿಸುವ ಮೂಲಕ ಇಂಧನದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿದೆ. ಜೊತೆಗೆ, ದೇಶದಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿಯೂ ಪ್ರಗತಿ ಸಾಧಿಸಲಾಗಿದೆ ಎಂದರು.
ರೈಲ್ವೆ, ಬ್ಯಾಂಕಿಂಗ್, ಅಂಚೆ ಇಲಾಖೆ, ಸಹಾಯಕ ಉಪನ್ಯಾಸಕ ಹುದ್ದೆಗಳು ಸೇರಿದಂತೆ ಸುಮಾರು ಏಳು ಇಲಾಖೆಗಳ 150 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು.
ನೈಋತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಪಿ. ಅನಂತ್, ಪ್ರಧಾನ ಹಿರಿಯ ಸಿಬ್ಬಂದಿ ಅಧಿಕಾರಿ ಸೂರ್ಯ ಪ್ರಕಾಶ ಸೇರಿದಂತೆ ರೈಲ್ವೆ ಹಿರಿಯ ಅಧಿಕಾರಿಗಳಿದ್ದರು. ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಬೇಲಾ ಮೀನಾ ಸ್ವಾಗತಿಸಿದರು.