ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ (pocso) 
ಧಾರವಾಡ

(pocso) ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಹುಬ್ಬಳ್ಳಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರ ಕುರಿತು ಇಲ್ಲಿಯ ಶಹರ ಠಾಣೆಯಲ್ಲಿ ಪೋಕ್ಸೊ (pocso) ಪ್ರಕರಣ ದಾಖಲಾಗಿದೆ.
ಅದೇ ಏರಿಯಾದ 15 ವರ್ಷದ ಮೂವರು ಹುಡುಗರು ಮನೆಯಲ್ಲಿದ್ದ 12 ವರ್ಷದ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಲೈಂಗಿಕ ದೌರ್ಜನ್ಯವೂ ನಡೆದಿದೆ. ಇಬ್ಬರು ಪ್ರೌಢ ಶಾಲೆ ಒದುತ್ತಿದ್ದು, ಮತ್ತೊಬ್ಬ ಶಾಲೆಗೆ ಹೋಗುತ್ತಿಲ್ಲ. ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಬಾಲಕಿಗೆ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಲಾಗಿದೆ.
7-8 ದಿನಗಳಿಂದ ಈ ಮೂವರು ಬಾಲಕಿಗೆ ತೊಂದರೆ ಕೊಡುತ್ತಿದ್ದರು. ಲೈಂಗಿಕ ದೌರ್ಜನ್ಯ ಎಸಗಿದ್ದರ ಕುರಿತು ವಿಡಿಯೋ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಅವರ ತಾಯಿ-ತಂದೆ ಹಾಗೂ ಮಗುವಿನಿಂದ ಈ ಕುರಿತು ಮಾಹಿತಿ ಪಡೆದುಕೊಳ್ಳಲಾಗುವುದು. ಸಮಗ್ರ ತನಿಖೆಗೆ 3 ತಂಡಗಳನ್ನು ರಚಿಸಲಾಗಿದೆ.
ತಂದೆ-ತಾಯಿ ಕೆಲಸಕ್ಕೆ ಹೋಗುತ್ತಿದ್ದರೆ ತಮ್ಮ ಮಕ್ಕಳ ಮೇಲೆ ವಿಶೇಷ ಗಮನವಿಡಬೇಕು. ಎಲ್ಲರೂ ಈ ನಿಟ್ಟಿನಲ್ಲಿ ಜಾಗೃತರಾಗಬೇಕು ಎಂದು ಹು-ಧಾ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ‘ಸುದ್ದಿಗಾರರ’ ಮುಂದೆ ವಿನಂತಿಸಿದರು.