ಧಾರವಾಡ: ನಗರದ ಶ್ರೀ ಸತ್ಯಸಾಯಿ ಮಹಿಳಾ ಪದವಿಪೂರ್ವ ಕಾಲೇಜಿನ ಪ್ರಥಮ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಪೂರ್ವಿ ಅವರು ಗಿನ್ನೆಸ್ ವಿಶ್ವ ದಾಖಲೆ ಸಾಧನೆಯಲ್ಲಿ ಭಾಗವಹಿಸಿ ವಿಶೇಷ ಗೌರವಕ್ಕೆ ಪಾತ್ರರಾಗಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಬೆಂಗಳೂರಿನಲ್ಲಿ ಅಕ್ಷರ್ ಯೋಗ ಕೇಂದ್ರ ಆಯೋಜಿಸಿದ್ದ "21 ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಆಫಿಶಿಯಲ್ ಅಟೆಂಪ್ಟ್ ಇನ್ ಯೋಗಾಸನಾಸ್' ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿನಿ ಶ್ರೀ ಸತ್ಯಸಾಯಿ ಶಿಕ್ಷಣ ಟ್ರಸ್ಟ್ನ ಪದಾಧಿಕಾರಿಗಳು, ಶೈಕ್ಷಣಿಕ ನಿರ್ದೇಶಕರು, ಪ್ರಾಚಾರ್ಯರು, ಉಪನ್ಯಾಸಕರು ಅಭಿನಂದಿಸಿದ್ದಾರೆ.