Precautions ಹುಬ್ಬಳ್ಳಿಯ ಕೋರ್ಟ ವೃತ್ತದ ರಸ್ತೆ ಅವಸ್ಥೆ. 
ಧಾರವಾಡ

Precautions ಮಳೆಗಾಲದ ಮುನ್ನೆಚ್ಚರಿಕೆ ವಹಿಸಿ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಮಹೇಶ ಟೆಂಗಿನಕಾಯಿ ಸೂಚನೆ
  • ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ
ಹುಬ್ಬಳ್ಳಿ: Precautions ಈಗಾಗಲೇ ಮಳೆಗಾಲ ಪ್ರಾರಂಭವಾಗಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಬೇಕೆಂದು ಶಾಸಕ ಮಹೇಶ ಟೆಂಗಿನಕಾಯಿ ಸೂಚಿಸಿದ್ದಾರೆ.
ಇಲ್ಲಿಯ ಮಹಾನಗರ ಪಾಲಿಕೆ ಕಚೇರಿಯಲ್ಲಿ ಕಂದಾಯ, ಅರಣ್ಯ ಮತ್ತು ಹೆಸ್ಕಾಂ ಇತರ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮಳೆಗಾಲಕ್ಕೆ ವಿವಿಧ ಇಲಾಖೆಗಳು ಕೈಗೊಂಡ ಕ್ರಮಗಳ ವಿವರ ಪಡೆದರು.
ನಾಲಾ ಸ್ವಚ್ಛತೆ ಕಾರ್ಯ ಈಗಾಗಲೇ ನಡೆದಿದೆ ಮತ್ತು ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗದಂತೆ ಗಮನ ಹರಿಸಬೇಕಿದೆ. ಕೆಲವು ರಸ್ತೆಗಳಲ್ಲಿ ಗಿಡಮರಗಳ ಕಟಿಂಗ್​ ಬಾಕಿ ಉಳಿದಿದೆ. ಶಿಥಿಲಗೊಂಡ ವಿದ್ಯುತ್​ ಕಂಬಗಳನ್ನು ಬದಲಿಸಬೇಕು ಎಂದು ಶಾಸಕರು ಸೂಚಿಸಿದರು.
ಹವಾಮಾನ ಇಲಾಖೆಯ ಪ್ರಕಾರ ಈಗಾಗಲೇ ಹುಬ್ಬಳ್ಳಿ ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ ಘೋಷಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು.
ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿಯಾಗದ ರೀತಿಯಲ್ಲಿ ಇಲಾಖೆಗಳು ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು.
ಸಾರ್ವಜನಿಕರು ಕೂಡ ಮಳೆ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರಬೇಕು. ಮಳೆ ಇದ್ದಾಗ ಗಿಡ ಮರಗಳ ಕೆಳಗಡೆ ನಿಲ್ಲುವಾಗ ಮತ್ತು ಯಾವುದೇ ಕಟ್ಟಡದ ಅಕ್ಕಪಕ್ಕದಲ್ಲಿ ನೀಲ್ಲಬೇಕಾದಾಗ ಎಚ್ಚರಿಕೆ ವಹಿಸಬೇಕು ಎಂದು ಶಾಸಕರು ಹೇಳಿದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯು ಸಾರ್ವಜನಿಕರಿಗಾಗಿ ಹೆಲ್ಪ್​ಲೈನ್​ ಆರಂಭಿಸಬೇಕು. ಅದರ ಮೂಲಕ ಜನರ ಸಮಸ್ಯೆಗೆ ಶೀಘ್ರ ಸ್ಪಂದಿಸಬೇಕು ಎಂದು ಹೇಳಿದರು.