tiranga ಹುಬ್ಬಳ್ಳಿ ಅರವಿಂದ ನಗರದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಹರ್ ಘರ್ ತಿರಂಗಾ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಮಹಾನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ ಮಾತನಾಡಿದರು.  
ಧಾರವಾಡ

ಹರ್ ಘರ್ ತಿರಂಗಾ ಅಭಿಯಾನದ ಪೂರ್ವಭಾವಿ tiranga

ಪ್ರಮುಖ ಮುಖ್ಯಾಂಶಗಳು

  • ಆ. 10 ರಿಂದ 13ರವರೆಗೆ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಲು ಕರೆ
  • ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಬೇಕು
  • ಪೂರ್ವ ಕ್ಷೇತ್ರದಲ್ಲಿ ಆ. 10 ರಂದು ಜಾಥಾ ನಡೆಸಲು ನಿರ್ಧರಿಸಲಾಗಿದೆ.
ಅಧ್ಯಕ್ಷತೆ ವಹಿಸಿದ್ದ ಪಕ್ಷದ ಮಹಾನಗರ ಜಿಲ್ಲಾ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ ಮಾತನಾಡಿ, ಆ. 10 ರಿಂದ 13 ರವರೆಗೆ ಹುಬ್ಬಳ್ಳಿಯ ಪ್ರತಿ ವಾರ್ಡಿನಲ್ಲೂ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಾಥಾ ಹಮ್ಮಿಕೊಳ್ಳಬೇಕು. ಈ ಜಾಥಾದಲ್ಲಿ ಗಣ್ಯರು, ಹಿರಿಯ ನಾಗರಿಕರು, ಉದ್ಯಮಿಗಳು, ಮಾಜಿ ಸೈನಿಕರು ಮತ್ತು ವಿದ್ಯಾರ್ಥಿಗಳನ್ನು ಒಳಗೊಳ್ಳಬೇಕು ಎಂದು ತಿಳಿಸಿದರು.
ಪೂರ್ವ ಕ್ಷೇತ್ರದಲ್ಲಿ ಆ. 10 ರಂದು ಜಾಥಾ ನಡೆಸಲು ನಿರ್ಧರಿಸಲಾಗಿದೆ. ಆ. 13 ರಿಂದ 15 ರವರೆಗೆ ಪ್ರತಿ ಮನೆಯ ಮೇಲೂ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಲಿಂಗರಾಜ ಪಾಟೀಲ, ವಿಭಾಗೀಯ ಪ್ರಭಾರಿ ಜಯತೀರ್ಥ ಕಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಸಂತ ನಾಡಜೋಶಿ, ಪಾಲಿಕೆ ಸದಸ್ಯ ಶಿವು ಮೆಣಸಿನಕಾಯಿ, ಪ್ರಮುಖರಾದ ಬಸವರಾಜ ಗರಗ ಹಾಗೂ ಇತರರಿದ್ದರು.