ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗಾಗಿ, ಬುನಾದಿ ಸಾರತೆ ಮತ್ತು ಸಂಖ್ಯಾಜ್ಞಾನ ಕಾರ್ಯಕ್ರಮ ಹಾಗೂ ಪಾಠ ಆಧಾರಿತ ಮೌಲ್ಯಾಂಕನವನ್ನು (ಎಲ್ಬಿಎ) ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಶಿಕರು ಹಾಗೂ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಶಾಲಾ ಶಿಣ ಇಲಾಖೆಯ ಅಪರ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಹೇಳಿದರು.
ನಮ್ಮ ವಿಭಾಗದಲ್ಲಿ ಶೇ. 100 ಫಲಿತಾಂಶ ದಾಖಲಿಸುವುದಷ್ಟೇ ಗುರಿಯಾಗಬಾರದು. ವಿದ್ಯಾಥಿರ್ಗಳ ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸುವ ಮೂಲಕ ಅತ್ಯುತ್ತಮ ಮತ್ತು ಗುಣಮಟ್ಟದ
ಪಡೆಯಲು ಶ್ರಮಿಸಬೇಕು. ಈ ನಿಟ್ಟಿನಲ್ಲಿ ಮಿಷನ್ 60 ಪ್ಲಸ್ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುವುದು. ಇದನ್ನು ಯಶಸ್ವಿಗೊಳಿಸಲು ಎಲ್ಲರೂ ಶ್ರಮಿಸಬೇಕು ಎಂದರು.
ಇಲಾಖೆಯ ನಿರ್ದೇಶಕಿ ಮಮತಾ ನಾಯಕ, ಸಹ ನಿರ್ದೇಶಕಿ ಜಯಶ್ರೀ ಕಾರೇಕರ, ಉಪ ನಿರ್ದೇಶಕರಾದ ಗಿರೀಶ ಪದಕಿ, ಬಸವರಾಜ ನಾಲತವಾಡ, ಉಮೇಶ ಬೊಮ್ಮಕ್ಕನವರ ಹಾಗೂ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು.