ಹಳೇ ಹುಬ್ಬಳ್ಳಿ ಆಸಾರ ಓಣಿ (Prohibitory order) ಪ್ರದೇಶದಲ್ಲಿ ಪೊಲೀಸರು ಶುಕ್ರವಾರ ಪಥಸಂಚಲನ ನಡೆಸಿದರು. 
ಧಾರವಾಡ

ಪ್ರತಿಭಟನೆ ಹಿನ್ನೆಲೆಯಲ್ಲಿ (Prohibitory order) ನಿಷೇಧಾಜ್ಞೆ ಜಾರಿ

ಸಂತೋಷ ವೈದ್ಯ

ಹಳೇ ಹುಬ್ಬಳ್ಳಿ ಆಸಾರ ಓಣಿಯ (Prohibitory order) ಶ್ರೀ ಭವಾನಿ ಶಂಕರ ನಾರಾಯಣ ದೇವಸ್ಥಾನಕ್ಕೆ ಸೇರಿದ ಪುಷ್ಕರಣಿ ಮೇಲೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ರಸ್ತೆ ನಿರ್ಮಾಣ ಮಾಡಿದೆಯೆಂದು ಆರೋಪಿಸಿ ಹಿಂದೂ ಸಂಘಟನೆಗಳು ಶನಿವಾರ (ಆ. 22) ಪ್ರತಿಭಟನೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ನಿಷೇಧಾಜ್ಞೆ ಜಾರಿ ಮಾಡಿದೆ.

ಆಸಾರ ಓಣಿಯಿಂದ (ಹೊಂಡ) ಸುತ್ತಮುತ್ತಲಿನ 500 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ 6ರಿಂದ ರಾತ್ರಿ 10 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಈ ಅವಧಿಯಲ್ಲಿ ನಿಷೇಧಿತ ಪ್ರದೇಶದಲ್ಲಿ ಸಾರ್ವಜನಿಕರು ಗುಂಪು ಸೇರುವುದು, ಗುಂಪಾಗಿ ತಿರುಗಾಡುವುದು, ನಿಷೇಧಿತ ವಸ್ತುಗಳನ್ನು ತೆಗೆದುಕೊಂಡು ಓಡಾಡುವುದು, ಘೊಷಣೆಗಳನ್ನು ಕೂಗುವುದನ್ನು ನಿರ್ಬಂಧಿಸಲಾಗಿದೆ. ಯಾರು ಈ ನಿಯಮಗಳನ್ನು ಉಲ್ಲಂಘನೆ ಮಾಡಿದಲ್ಲಿ ಸೂಕ್ತ ಕಾನೂನು ಕ್ರಮ ಕೈಕೊಳ್ಳಲಾಗುವುದು ಕಮೀಷನರೇಟ್ ಪ್ರಕಟಣೆ ಹೊರಡಿಸಿದೆ.
ವ್ಯಾಪಕ ಬಂದೋಬಸ್ತ್::
ಹೋರಾಟದ ಹಿನ್ನೆಲೆಯಲ್ಲಿ ಆಸಾರ ಓಣಿ, ಶ್ರೀ ಭವಾನಿ ಶಂಕರ ನಾರಾಯಣ ದೇವಸ್ಥಾನ ಹಾಗೂ ಸುತ್ತಲಿನ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನದಿಂದಲೇ ವ್ಯಾಪಕ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಅಲ್ಲಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದೆ. ಬಡಾವಣೆಯಲ್ಲಿ ಪೊಲೀಸ್​ರು ಪಥ ಸಂಚಲನ ನಡೆಸಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಹಳೇ ಹುಬ್ಬಳ್ಳಿ ಆಸಾರ ಓಣಿಯ ಶ್ರೀ ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಇದ್ದ ಸ್ಥಳದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವುದನ್ನು ಖಂಡಿಸಿ ನಾವು ನಡೆಸುತ್ತಿರುವ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಪಾಲಿಕೆ ನಿರ್ಮಾಣ ಮಾಡಿರುವ ರಸ್ತೆಯನ್ನು ಹೋರಾಟದಿಂದ ತೆರವುಗೊಳಿಸುತ್ತೇವೆ ಎಂದು ಪುಷ್ಕರಣಿ ಸಂರಕ್ಷಣಾ ಸಮಿತಿ ಸಹ ಸಂಚಾಲಕ ಜಯತೀರ್ಥ ಕಟ್ಟಿ ತಿಳಿಸಿದ್ದಾರೆ.