ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಿತೂರಿ ಖಂಡಿಸಿ ಹುಬ್ಬಳ್ಳಿಯ ಬಿಜೆಪಿ ಕಚೇರಿಗೆ ೇರಾವ್ (protest) ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದರು.
ಹುಬ್ಬಳ್ಳಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಿತೂರಿ ಖಂಡಿಸಿ ಇಲ್ಲಿಯ ಅರವಿಂದ ನಗರದ ಬಿಜೆಪಿ ಕಚೇರಿಗೆ ೇರಾವ್ (protest) ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದರು.
ಕಾರವಾರ ರಸ್ತೆಯ ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಆಗಮಿಸಿದ ಕಾರ್ಯಕರ್ತರನ್ನು ಬಿಜೆಪಿ ಕಚೇರಿಯ ಅನತಿ ದೂರದಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆಯೊಡ್ಡಿದರು.
ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ ಮಾತನಾಡಿ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸದಾ ಪಿತೂರಿ ನಡೆಸುತ್ತಿದೆ. ನ್ಯಾಷನಲ್ ಹೆರಾಲ್ಡ್‌ನಲ್ಲಿ ಪ್ರಕರಣದಲ್ಲಿಯೂ ಇದೇ ರೀತಿ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ಶಾ ಅವರು ಇಲ್ಲ ಸಲ್ಲದ ಪ್ರಕರಣಗಳನ್ನು ಕಾಂಗ್ರೆಸ್ ನಾಯಕರ ಮೇಲೆ ಹಾಕುತ್ತಿದ್ದಾರೆ. ಈ ಮೂಲಕ ಕಾಂಗ್ರೆಸ್‌ನವರನ್ನು ತಮ್ಮ ಸುಪರ್ದಿಯಲ್ಲಿಟ್ಟುಕೊಳ್ಳಲು ಬಯಸುತ್ತಿದೆ. ಆದರೆ, ಕಾನೂನು ಕಣ್ಣು ತೆರೆದಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ತಿರಸ್ಕರಿಸಿರುವುದು ಸ್ವಾಗತಾರ್ಹ ಎಂದರು.
ನಂತರ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ತಮ್ಮ ವಾಹನಗಳಲ್ಲಿ ಕರೆದೊಯ್ದರು.
ಮಹಾನಗರ ಜಿಲ್ಲಾಧ್ಯಕ್ಷ ಅಲ್ತಾಫ್ ಹಳ್ಳೂರ, ಪಾಲಿಕೆ ಸದಸ್ಯ ಅರ್ಜುನ ಪಾಟೀಲ, ಪ್ರಮುಖರಾದ ಸದಾನಂದ ಡಂಗನವರ, ಶಿವಾನಂದ ಮುತ್ತಣ್ಣವರ, ಗೌರಮ್ಮ ಬಳೋಗಿ, ಸರೋಜಾ ಹೂಗಾರ, ಚಳ್ಳಮರದ ಶೇಖ್ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.