Protest ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಧಾರವಾಡ ಜಿಲ್ಲಾ ಮಡಿವಾಳರ ಸಂಘದ ಪ್ರಧಾನ ಕಾರ್ಯದರ್ಶಿ ನವೀನಕುಮಾರ ಮಡಿವಾಳವರ,
- ಧಾರವಾಡ ಜಿಲ್ಲೆಯಿಂದ 200ಕ್ಕೂ ಹೆಚ್ಚು ಜನರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
- ಮಡಿವಾಳ ಸಮಾಜವನ್ನು ಎಸ್ಸಿಗೆ ಸೇರಿಸಬೇಕು.
- ವರದಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕೊಳೆಯುತ್ತಿದೆ.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದ ಧಾರವಾಡ ಜಿಲ್ಲಾ ಮಡಿವಾಳರ ಸಂಘದ ಪ್ರಧಾನ ಕಾರ್ಯದರ್ಶಿ ನವೀನಕುಮಾರ ಮಡಿವಾಳವರ, ಧಾರವಾಡ ಜಿಲ್ಲೆಯಿಂದ 200ಕ್ಕೂ ಹೆಚ್ಚು ಜನರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದರು.
ಮಡಿವಾಳ ಸಮಾಜ ರಾಜಕೀಯವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅತಿ ಹಿಂದುಳಿದಿದೆ. ಸಮಾಜಕ್ಕೆ ಸಿಗಬೇಕಾದ ಸೌಲಭ್ಯ ಹಾಗೂ ಮನ್ನಣೆ ಪಡೆಯಲು ಸಂಘಟನಾತ್ಮವಾಗಿ ಒಗ್ಗೂಡಿ ಪರಿಶಿಷ್ಟ ಜಾತಿ ಮೀಸಲಾತಿ ನೀಡಲು ಆಗ್ರಹಿಸುತ್ತಿದ್ದೇವೆ.
ಕಳೆದ ನೂರು ವರ್ಷದಿಂದ ಮಡಿವಾಳ ಸಮಾಜವನ್ನು ಎಸ್ಸಿಗೆ ಸೇರಿಸಬೇಕು ಎಂಬ ಬೇಡಿಕೆ ಇದೆ. ಆದರೂ ಬೇಡಿಕೆ ಈಡೇರಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಇತ್ತೀಚೆಗೆ ಸರ್ಕಾರ ಲಾಂಡ್ರಿ ಉದ್ಯಮಕ್ಕೆ ಸೌಲಭ್ಯ ನೀಡುವುದಾಗಿ ಘೋಷಿಸಿದೆ. ಇದು ನಮ್ಮ ವೃತ್ತಿಯಾಗಿದ್ದು, ಇದರ ಅವಶ್ಯಕತೆ ನಮಗಿಲ್ಲ. ಸಮಾಜ ಬೆಳೆಯಬೇಕಾದರೆ ಮೀಸಲಾತಿ ಅವಶ್ಯಕವಿದೆ ಎಂದರು.
2009ರಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಮ್ಮ ಸಮಾಜದ ಕುಲಶಾಸ್ತ್ರೀಯ ಅಧ್ಯಯನ ಹಾಗೂ ಸಂಶೋಧನೆ ಕೈಗೊಳ್ಳಲು ಮೈಸೂರು ವಿಶ್ವವಿದ್ಯಾಲಯದ ಪ್ರೊ. ಅನ್ನಪೂರ್ಣ ಅವರನ್ನು ನೇಮಿಸಿದ್ದರು.
ಅವರು 2011ರಲ್ಲಿ ವರದಿ ಸಿದ್ದ ಪಡಿಸಿ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಸದ್ಯ ವರದಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕೊಳೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಶಿವಲಿಂಗಪ್ಪ ಮಡಿವಾಳವರ, ಸತೀಶ ಕೌತಾಳ, ರಂಗಸ್ವಾಮಿ ಬಳ್ಳಾರಿ, ಅಶೋಕ ಮಡಿವಾಳರ ಇದ್ದರು.