ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್ ಆರ್. 
ಧಾರವಾಡ

ಶಾಲೆಗಳಿಗೆ ಅಗತ್ಯಕ್ಕನುಗುಣವಾಗಿ ಗ್ಯಾಸ್ ಸಂಪರ್ಕ ಕಲ್ಪಿಸಿ

ಧಾರವಾಡ: ಶಾಲಾ ಮಕ್ಕಳಿಗೆ ಮಧ್ಯಾಹ್ನದ ಊಟ ಹಾಗೂ ಮೊಟ್ಟೆ ವಿತರಣೆಯಲ್ಲಿ ಯಾವುದೇ ವ್ಯತ್ಯಯವಾಗಬಾರದು. ಶಾಲೆಗಳು ಹಾಗೂ ವಸತಿ ನಿಲಯಗಳಿಗೆ ಅಗತ್ಯವಾದ ಗ್ಯಾಸ್ ಸಂಪರ್ಕಗಳನ್ನು ತಕ್ಷಣವೇ ಒದಗಿಸಬೇಕು ಎಂದು ಜಿಲ್ಲಾದಿಕಾರಿ ಸ್ನೇಹಲ್ ಆರ್. ಅವರು ಹೇಳಿದರು.
ಜಿಲ್ಲಾಽಕಾರಿಗಳ ಕಚೇರಿ ಸಭಾಂಗಣದಲ್ಲಿ ಪೆಟ್ರೋಲ್ ಬಂಕ್ ಕಂಪನಿಗಳ ಪ್ರತಿನಿಽಗಳ ಮತ್ತು ಗ್ಯಾಸ್ ವಿತರಕರ ಕಂಪನಿಗಳ ಪ್ರತಿನಿಽಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. ಶಾಲೆಯಲ್ಲಿ ಮಕ್ಕಳಿಗೆ ಬೇಯಿಸಿದ ಮೊಟ್ಟೆ ನೀಡುವ ಯೋಜನೆ ಸಮರ್ಪಕವಾಗಿ ಜಾರಿಯಾಗಲು ಮೊಟ್ಟೆ ಕುದಿಸಲು ಗ್ಯಾಸ್ ಸಂಪರ್ಕ ಅತ್ಯಗತ್ಯವಾಗಿದ್ದು, ಸೋಮವಾರದೊಳಗೆ ಎಲ್ಲ ಶಾಲೆಗಳು ಮತ್ತು ಹಾಸ್ಟೆಲ್‌ಗಳಿಗೆ ಗ್ಯಾಸ್ ಸಂಪರ್ಕ ಕಲ್ಪಿಸಬೇಕು ಎಂದು ಸೂಚಿಸಿದರು.
ಇಂಡಿಯನ್ ಆಯಿಲ್ ಕಾರ್ಪೋರೇಷನ್, ಭಾರತ ಪೆಟ್ರೋಲಿಯಂ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗಳು ಈಗಾಗಲೇ ಎಷ್ಟು ಸಂಪರ್ಕಗಳನ್ನು ನೀಡಿವೆ ಎಂಬ ಕುರಿತು ಸೋಮವಾರದೊಳಗೆ ವರದಿ ಸಲ್ಲಿಸುವಂತೆ ತಿಳಿಸಿದರು.
ಜಿಪಂ ಸಿಇಒ ಭುವನೇಶ ಪಾಟೀಲ, ಜಿಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಶಾಲಾ ಶಿಕ್ಷಣ ಇಲಾಖೆಯ ಅಕ್ಷರ ದಾಸೋಹ ಯೋಜನೆ ಶಿಕ್ಷಣಾಽಕಾರಿ ರೂಪಾ ಪೂರಮಕರ ಹಾಗೂ ಪೆಟ್ರೋಲ್ ಬಂಕ್ ಮತ್ತು ಗ್ಯಾಸ್ ಮಾಲೀಕರು ಉಪಸ್ಥಿತರಿದ್ದರು.