ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಜೂ. 28ರಂದು 
ಧಾರವಾಡ

ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಜೂ. 28ರಂದು

ಜಗದೀಶ ಹೊಂಬಳಿ
ಧಾರವಾಡ: ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಜೂ. 28ರಂದು ಹಮ್ಮಿಕೊಳ್ಳಲಾಗಿದೆ. `0' ರಿಂದ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಾಗುವುದು. ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಸೂಚಿಸಿದರು.
ಜಿಲ್ಲಾಽಕಾರಿ ಕಚೇರಿಯಲ್ಲಿ ಸೋಮವಾರ ರಾಷ್ಟಿçÃಯ ಪಲ್ಸ್ ಪೋಲಿಯೋ 2026 ಕಾರ್ಯಕ್ರಮದ ಜಿಲ್ಲಾ ಮಟ್ಟದ ಟಾಸ್ಕ್ಪೋರ್ಸ್ ಸಮಿತಿ ಸಭೆ ನಡೆಸಿ ಮಾತನಾಡಿದರು.
ಪಲ್ಸ್ ಪೋಲಿಯೋ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲ ಅರ್ಹ ಮಕ್ಕಳಿಗೆ ಕಡ್ಡಾಯವಾಗಿ ಎರಡು ಹನಿ ಪೋಲಿಯೋ ಲಸಿಕೆ ನೀಡಬೇಕು. ಮನೆ ಮನೆ ಭೇಟಿ ಮೂಲಕ ಆರೋಗ್ಯ ಕಾರ್ಯಕರ್ತರು 5 ವರ್ಷದವರೆಗಿನ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯವನ್ನು ಸಮರ್ಪಕವಾಗಿ ಕೈಗೊಳ್ಳಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ 5 ವರ್ಷದೊಳಗಿನ 2,08,779 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, 889 ಲಸಿಕಾ ಕೇಂದ್ರಗಳಿವೆ. 96 ಟ್ರಾಂಜಿಸ್ಟ್ ತಂಡಗಳು ಹಾಗೂ 57 ಮೊಬೈಲ್ ತಂಡಗಳನ್ನು ನಿಯೋಜಿಸಲಾಗಿದೆ. ಕಾರ್ಯಕ್ರಮಕ್ಕಾಗಿ 3,862 ವ್ಯಾಕ್ಸಿನೇರ‍್ಸ್ಗಳು ಮತ್ತು 218 ಮೇಲ್ವಿಚಾರಕರು ಕಾರ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಗ್ರಾಪಂ ಮಟ್ಟದಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಕರಪತ್ರ ಹಾಗೂ ಬ್ಯಾನರ್‌ಗಳನ್ನು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಗ್ರಾಮಗಳಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತು ಅರಿವು ಮೂಡಿಸುವ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಸಭೆಯಲ್ಲಿ ಸೂಚಿಸಿದರು.
ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕಾಗಿ ಜಿಲ್ಲೆಗೆ ಒಟ್ಟು 189 ವಾಹನಗಳ ಅಗತ್ಯವಿದ್ದು, ವಿವಿಧ ತಾಲೂಕುಗಳಿಗೆ ಅವಶ್ಯಕತೆ ಅನುಸಾರ ವಾಹನಗಳನ್ನು ನಿಯೋಜಿಸಲಾಗುವುದು. ಬಸ್ ನಿಲ್ದಾಣಗಳಲ್ಲಿ ಆರೋಗ್ಯ ಇಲಾಖೆಯ ಟ್ರಾನ್ಸಿಸ್ಟ್ ತಂಡಗಳ ಮೂಲಕ ಮಕ್ಕಳಿಗೆ ಲಸಿಕೆ ಹಾಕಲು ಕ್ರಮ ವಹಿಸಬೇಕು. ಬಿಆರ್‌ಟಿಎಸ್ ನಿಲ್ದಾಣಗಳಲ್ಲಿ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಪೋಲಿಯೋ ಬೂತ್‌ಗಳನ್ನು ತೆರೆಯುವುದು ಮತ್ತು ನಿಲ್ದಾಣಗಳಲ್ಲಿನ ವಿದ್ಯುತ್ ಮಾಹಿತಿ ಫಲಕದಲ್ಲಿ ಎಲ್ಲ 0-5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಪ್ರಕಟಣೆ ಹೊರಡಿಸುವಂತೆ ಕ್ರಮ ವಹಿಸಲು ತಿಳಿಸಿದರು.
ಸಭೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನದ ಬಿತ್ತಿಪತ್ರವನ್ನು ಬಿಡುಗಡೆ ಮಾಡಲಾಯಿತು. ಡಿಎಚ್‌ಒ ಡಾ. ಪರಶುರಾಮ ಎಫ್.ಕೆ., ಜಿಲ್ಲಾ ಆರೋಗ್ಯ ಶಿಕ್ಷಣಾಽಕಾರಿ ಡಾ.ಬಿ.ಆರ್. ಪಾತ್ರೋಟ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಡಾ. ಶಶಿಧರ ಕಳಸೂರಮಠ, ಡಾ. ಕೆ.ಎನ್. ತನುಜಾ, ಡಿ.ಎಂ.ಓ ಡಾ. ಮಂಜುನಾಥ ಸೊಪ್ಪಿನಮಠ ಇತರರಿದ್ದರು.