pushkarani protestಹಳೇ-ಹುಬ್ಬಳ್ಳಿಯ ಆಸಾರ ಓಣಿಯ ಶ್ರೀ ಭವಾನಿ ಶಂಕರ ನಾರಾಯಣ ದೇವಸ್ಥಾನಕ್ಕೆ ಸೇರಿದ ಪುಷ್ಕರಣೆ ಮೇಲೆ ರಸ್ತೆ ನಿರ್ಮಾಣ ಮಾಡಿರುವುದನ್ನು ಖಂಡಿಸಿ ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಹುಬ್ಬಳ್ಳಿಯ ಚನ್ನಪೇಟೆ ಸರ್ಕಾರಿ ಶಾಲೆ ಮುಂದೆ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು. 
ಧಾರವಾಡ

pushkarani protest ಪುಷ್ಕರಣಿ ಉಳಿವಿಗೆ ಒತ್ತಾಯಿಸಿ ಪ್ರತಿಭಟನೆ

ಮರಿದೇವ ಹೂಗಾರ

ಹುಬ್ಬಳ್ಳಿ: ಹಳೇ-ಹುಬ್ಬಳ್ಳಿಯ ಆಸಾರ ಓಣಿಯ ಶ್ರೀ ಭವಾನಿ ಶಂಕರ ನಾರಾಯಣ ದೇವಸ್ಥಾನಕ್ಕೆ ಸೇರಿದ ಪುಷ್ಕರಣೆ

pushkarani protest

ಮೇಲೆ ರಸ್ತೆ ನಿರ್ಮಾಣ ಮಾಡಿರುವುದನ್ನು ತೆರವುಗೊಳಿಸುವಂತೆ ಆಗ್ರಹಿಸಿ ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಇಲ್ಲಿಯ ಚನ್ನಪೇಟೆ ಸರ್ಕಾರಿ ಶಾಲೆ ಮುಂದೆ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು. ಇದೇ ವೇಳೆ ಪೊಲೀಸರು ನೂರಾರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

ವಿಧಾನಸಭೆ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ, ಶಾಸಕ ಮಹೇಶ ಟೆಂಗಿನಕಾಯಿ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್, ಜಯತೀರ್ಥ ಕಟ್ಟಿ ಮಾತನಾಡಿ, ಸನಾತನ ಹಿಂದೂ ಧರ್ಮಕ್ಕೆ ಸೇರಿದ ಪುಷ್ಪಕರಣಿಯನ್ನು ಬಂದ್ ಮಾಡಲಾಗಿದೆ. ಇಲ್ಲಿ ರಸ್ತೆ ನಿರ್ಮಿಸಲಾಗಿದೆ. ಕೂಡಲೇ ಅಲ್ಪಸಂಖ್ಯಾತರ ಓಲೈಕೆ ಬಿಟ್ಟು ನಿರ್ಮಿಸಿರುವ ರಸ್ತೆಯನ್ನು ತೆರವುಗೊಳಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನಿಡಿದರು.
ಇದೇ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.
ಎಂಎಲ್‌ಸಿ ಪ್ರದೀಪ ಶೆಟ್ಟರ್, ಸಂಚಾಲಕ ಹರಿ ಓಂ ಸುಧಾಕರ ಶೆಟ್ಟಿ, ಮಾಜಿ ಉಪ ಮೇಯರ್ ಸಂತೋಷ ಚವ್ಹಾಣ, ಪಾಲಿಕೆ ಸದಸ್ಯರಾದ ಬೀರಪ್ಪ ಖಂಡೇಕರ, ಶಿವು ಮೆಣಸಿನಕಾಯಿ, ದತ್ತಮೂರ್ತಿ ಕುಲಕರ್ಣಿ, ಗೋವರ್ಧನರಾವ್ ಇತರರಿದ್ದರು. ಪೊಲೀಸ್ ಆಯುಕ್ತ ಎನ್. ಶಶಿಕುಮಾರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.