ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ (rajat ullagaddimath) ನಿಮಿತ್ತ ಉಣಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಭಾನುವಾರ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಗೆದ್ದ ಮಹಿಳೆಯರಿಗೆ ಬಹುಮಾನ ವಿತರಿಸಲಾಯಿತು. 
ಧಾರವಾಡ

(rajat ullagaddimath) ಕಾಂಗ್ರೆಸ್‌ನಿಂದ ಮಹಿಳೆಯರ ಬದುಕು ಹಸನು

ಹುಬ್ಬಳ್ಳಿ: ಉಣಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಗೋಪನಕೊಪ್ಪದ ದಾನಮ್ಮದೇವಿ ದೇವಸ್ಥಾನದ ಆವರಣದಲ್ಲಿ (rajat ullagaddimath) ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಭಾನುವಾರ ಏರ್ಪಡಿಸಲಾಗಿತ್ತು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಜತ್ ಉಳ್ಳಾಗಡ್ಡಿಮಠ ಮಾತನಾಡಿ, ಮಹಿಳೆ ಕೇವಲ ಕುಟುಂಬದ ಕಣ್ಣಲ್ಲ, ದೇಶದ ಶಕ್ತಿ. ಇಂದು ಮಹಿಳೆಯರು ಎಲ್ಲ ರಂಗಗಳಲ್ಲೂ ಮುಂಚೂಣಿಯಲ್ಲಿದ್ದಾರೆ. ಕಾಂಗ್ರೆಸ್ ಪಕ್ಷವು ಯಾವಾಗಲೂ ಮಹಿಳೆಯರ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯಕ್ಕೆ ಆದ್ಯತೆ ನೀಡುತ್ತಿದೆ. ನಮ್ಮ ಗ್ಯಾರಂಟಿ ಯೋಜನೆಗಳ ಮೂಲಕ ಮಹಿಳೆಯರ ಬದುಕು ಹಸನಾಗಿದೆ. ನಾರಿ ಶಕ್ತಿಯನ್ನು ಗೌರವಿಸುವುದು ನಮ್ಮ ಸಂಸ್ಕೃತಿಯ ಭಾಗವಾಗಬೇಕು ಎಂದರು.
ಹು-ಧಾ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಶ್ರುತಿ ಎನ್.ಎಸ್. ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಭಜನೆ, ಭಾವಗೀತೆ, ಭಕ್ತಿಗೀತೆ ಹಾಗೂ ರಂಗೋಲಿ ಸ್ಪರ್ಧೆಗಳಲ್ಲಿ ಮಹಿಳೆಯರು ಪಾಲ್ಗೊಂಡಿದ್ದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಪ್ರಮುರಾದ ಜೆ.ಎಸ್. ಹಿರೇಮಠ, ಗೌರಮ್ಮ ಬಾಳೋಗಿ, ಸುನಿಲ್ ಮಠಪತಿ, ಸ್ನೇಹಾ ಜಾಧವ, ಗೀತಾ ಮಹಾದೇವಪ್ಪನವರ, ಗಂಗಾಧರ ದೊಡ್ಡವಾಡ, ರಾಜೇಶ್ವರಿ ಟಿಕಂದರ, ಸೀಮಾ ಪಾಟೀಲ, ಶಕುಂತಲಾ ರೇಷ್ಮಿ ಇತರರಿದ್ದರು.