rambhapuri sree ಹುಬ್ಬಳ್ಳಿಯ ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಸಮುದಾಯ ಭವನದ ಆವರಣದಲ್ಲಿ ಮಂಗಳವಾರ ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಅದ್ದೂರಿಯಾಗಿ ಜರುಗಿತು. 
ಧಾರವಾಡ

rambhapuri sree ವೀರಭದ್ರ ದೇವರ ಆದರ್ಶ ಅಳವಡಿಸಿಕೊಳ್ಳುವುದು ಅಗತ್ಯ

ಹುಬ್ಬಳ್ಳಿ: ಸಮಾಜದಲ್ಲಿ ದುಷ್ಟ ಶಕ್ತಿಗಗಳಿಂದ ಅಸಮಾನತೆ, ಅಶಾಂತಿ ಮತ್ತು ಮೌಲ್ಯಗಳ ಕುಸಿತ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ವೀರಭದ್ರನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯ. ಯುವಕರು ಧರ್ಮದೊಂದಿಗೆ ಆಧುನಿಕ ಶಿಕ್ಷಣ, ಸಾಮಾಜಿಕ ಜವಾಬ್ದಾರಿ ಮತ್ತು ರಾಷ್ಟ್ರಪ್ರೇಮ ಬೆಳೆಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಬಾಳೆಹೊನ್ನೂರು rambhapuri sree ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಇಲ್ಲಿಯ ವಿದ್ಯಾನಗರದ ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಸಮುದಾಯ ಭವನದ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಜಗದ್ಗುರುಗಳು ಆಶೀರ್ವಚನ ನೀಡಿದರು.
ವೀರಭದ್ರ ಎಂದರೆ ಕೇವಲ ಶಸ್ತ್ರಧಾರಿ ದೈವದ ರೂಪವಲ್ಲ. ಧರ್ಮ ರಕ್ಷಣೆ, ದುಷ್ಟ ಶಕ್ತಿಗಳ ದಮನವೇ ವೀರಭದ್ರಸ್ವಾಮಿ ಅವತಾರದ ಮೂಲ ಉದ್ದೇಶವಾಗಿದೆ. ವಿವೇಕ, ಧೈರ್ಯ, ಶಿಸ್ತು, ಕರ್ತವ್ಯನಿಷ್ಠೆ ಮತ್ತು ಧರ್ಮಬದ್ಧ ಜೀವನವೇ ನಿಜವಾದ ವೀರತ್ವ. ವೀರಭದ್ರೇಶ್ವರಸ್ವಾಮಿ ದೇವಾಲಯಗಳು ಕೇವಲ ಪೂಜಾ ಕೇಂದ್ರಗಳಲ್ಲ. ಅವು ನಮ್ಮ ಜನಪರ ಸಂಸ್ಕೃತಿ, ಶೈವ ಪರಂಪರೆ, ಕಲೆ, ಆಚರಣೆ ಮತ್ತು ಸಮುದಾಯದ ಐತಿಹಾಸಿಕ ನೆನಪುಗಳನ್ನು ಉಳಿಸಿಕೊಂಡಿರುವ ಸಾಂಸ್ಕೃತಿಕ ಕೇಂದ್ರಗಳಾಗಿವೆ ಎಂದರು.
ಶ್ರೀ ವೀರಭದ್ರಸ್ವಾಮಿ ರಂಭಾಪುರಿ ಪೀಠದ ಕ್ಷೇತ್ರನಾಥನಾಗಿ ಮತ್ತು ಗೋತ್ರ ಪುರುಷನಾಗಿ ಪೂಜೆಗೊಳ್ಳುತ್ತಿದ್ದಾನೆ. ನಾಡಿನ ಯಾವುದೇ ಭಾಗದಲ್ಲಿ ಶ್ರೀ ವೀರಭದ್ರಸ್ವಾಮಿ ನೆಲೆಗೊಂಡಿದ್ದರೂ ಅತನ ಮೂಲ ಶಕ್ತಿಕೇಂದ್ರ ರಂಭಾಪುರಿ ಕ್ಷೇತ್ರವಾಗಿದೆ. ಜಾತಿ ಪ್ರದೇಶ ಪಕ್ಷ ಭೇದಗಳನ್ನು ಮೀರಿ ಧರ್ಮ, ಸಂಸ್ಕೃತಿ ಮತ್ತು ಮಾನವೀಯ ಮೌಲ್ಯಗಳ ಆಧಾರದ ಮೇಲೆ ಸಮಾಜ ಕಟ್ಟುವ ಸಂಕಲ್ಪ ಜಯಂತ್ಯುತ್ಸವದಿಂದ ನಡೆಯಬೇಕೆಂಬ ಆಶಯ ನಮ್ಮದು. ವೀರಭದ್ರನ ಶೌರ್ಯ ನಮ್ಮಲ್ಲಿ ಧೈರ್ಯವನ್ನು ಶಿವನ ತತ್ವ ನಮ್ಮಲ್ಲಿ ಜ್ಞಾನವನ್ನು ಧರ್ಮದ ಮಾರ್ಗ ನಮ್ಮಲ್ಲಿ ಸದಾಚಾರವನ್ನು ಬೆಳೆಸಲೆಂದು ಆಶಿಸಿದರು.
ಕಾಂಗ್ರೆಸ್ ಮಹಾನಗರ ಜಿಲ್ಲಾಧ್ಯಕ್ಷರಾಗಿ ನೇಮಕವಾದ ಸದಾನಂದ ಡಂಗನವರ, ಧಾರವಾಡ ಜಿಲ್ಲಾ ಗ್ರಾಮೀಣ ಅಧ್ಯಕ್ಷರಾಗಿ ನೇಮಕವಾದ ಚಂದ್ರಶೇಖರ ಜುಟ್ಟಲ ಅವರನ್ನು ಇದೇ ವೇಳೆ ಸನ್ಮಾನಿಸಲಾಯಿತು.
ಪ್ರಮುಖರಾದ ವಿ.ಜಿ. ಪಾಟೀಲ, ಆರ್.ಎಂ. ಹಿರೇಮಠ, ಬಂಗಾರೇಶ ಹಿರೇಮಠ, ಬಸವರಾಜ ಸುಳ್ಳದ, ಡಾ. ರಾಮು ಮೂಲಗಿ, ಸಂಶಿ ಉಮೇಶ, ಸುಮಂಗಲಾ ಹಿರೇಮಠ ಇತರರಿದ್ದರು. ವ್ಯವಸ್ಥಾಪಕ ಜಿ.ವಿ. ಹಿರೇಮಠ ಸ್ವಾಗತಿಸಿ ನಿರೂಪಿಸಿದರು.