voter ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಎಸ್ಐಆರ್ ಕುರಿತ ಸಭೆಯಲ್ಲಿ ಮಹಾನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ ಮಾತನಾಡಿದರು. ಅಶೋಕ ಕಾಟವೆ, ಲಿಂಗರಾಜ ಪಾಟೀಲ, ಸಂಜಯ ಕಪಟಕರ, ಶಿವು ಮೆಣಸಿನಕಾಯಿ ಹಾಗೂ ಇತರರಿದ್ದರು.
- ಮತದಾನದಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು.
- ಮತದಾರರ ಪಟ್ಟಿ ಪರಿಷ್ಕರಣೆ ಮಾಡಿ.
- ಬಿಎಲ್ಎ 1 ಹಾಗೂ ಬಿಎಲ್ಎ2 ಗಳ ಪಾತ್ರ ಹೆಚ್ಚಾಗಿದೆ.
ಇಲ್ಲಿನ ಅರವಿಂದ ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಎಸ್ಐಆರ್ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.
2002ರಲ್ಲಿ ಎಸ್ಐಆರ್ ನಡೆದಿತ್ತು. ಇದೀಗ, 23 ವರ್ಷಗಳ ನಂತರ 2026ರಲ್ಲಿ ಎಸ್ಐಆರ್ ನಡೆಯುತ್ತಿದೆ. ಭವಿಷ್ಯದಲ್ಲಿ ಎಸ್ಐಆರ್ ಮತ್ತೆ ಯಾವಾಗ ನಡೆಯುತ್ತದೆ ಎಂಬುದು ಗೊತ್ತಿಲ್ಲ ಎಂದು ಹೇಳಿದರು.
ಧಾರವಾಡ ಜಿಲ್ಲಾ ಎಸ್ಐಆರ್ ಸಂಯೋಜಕ ಸಂಜಯ ಕಪಟಕರ ಮಾತನಾಡಿ, ಏಪ್ರಿಲ್ 1 ರಿಂದ ನಡೆಯುವ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ವಿಶೇಷವಾಗಿ ಬಿಎಲ್ಎ 1 ಹಾಗೂ ಬಿಎಲ್ಎ2 ಗಳ ಪಾತ್ರ ಹೆಚ್ಚಾಗಿದೆ.
ಪಕ್ಷದ ಎಲ್ಲ ಪ್ರಮುಖರು ಮನೆ ಮನೆಗೆ ತೆರಳಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿ, ನಿಜವಾದ ಭಾರತೀಯರು ಮತದಾನದಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಪ್ರಧಾನ ಕಾರ್ಯದರ್ಶಿ ಶಿವು ಮೆಣಸಿನಕಾಯಿ, ಬಸವರಾಜ ಗರಗ, ಮೇಯರ್ ಜ್ಯೋತಿ ಪಾಟೀಲ, ಮಾಜಿ ಶಾಸಕ ಅಶೋಕ ಕಾಟವೆ, ಪ್ರಮುಖರಾದ ಲಿಂಗರಾಜ ಪಾಟೀಲ, ಶಂಕರ ಶೇಳಕೆ ಹಾಗೂ ಇತರರಿದ್ದರು.