ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ (rider accident) ಘಟನೆ
ಹುಬ್ಬಳ್ಳಿ: ಇಲ್ಲಿಯ ಗೋಕುಲ ರಸ್ತೆಯ ಅರ್ಬನ್ ಓಯಸಿಸ್ ಮಾಲ್ ಹತ್ತಿರ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ (rider accident) ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ.
ತಾಜ್‌ನಗರ ನಿವಾಸಿಗಳಾದ ಮಿಜಾಮುಲ್ಲಾ (25), ಫಯಾಜ್ ಭಾಗವಾನ(18) ಮೃತರು. ರಾತ್ರಿ ಗೋಕುಲ ರಸ್ತೆ ವಿಮಾನ ನಿಲ್ದಾಣದಿಂದ ಹೊಸೂರ ಕಡೆ ಬರುತ್ತಿದ್ದರು.
ಮಳೆ ಗಾಳಿಗೆ ಕೇಬಲ್ ವೈರ್ ತುಂಡರಿಸಿ ಇವರ ಮೇಲೆ ಬಿದ್ದಿದೆ. ಅದನ್ನು ತಪ್ಪಿಸಲು ಹೋದಾಗ ಬೈಕ್ ನಿಯಂತ್ರಣ ತಪ್ಪಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಉತ್ತರ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಉತ್ತರ ಸಂಚಾರಿ ಪೊಲೀಸ್ ಇನ್‌ಸ್ಪೆಕ್ಟರ್ ಸಂಗಮೇಶ ಪಾಲಬಾವಿ, ಪಿಎಸ್‌ಐ ಮೋಹನ ಭೇಟಿ ನೀಡಿ ಪರಿಶೀಲಿಸಿ, ಮೃತ ದೇಹಗಳನ್ನು ಕೆಎಂಸಿಆರ್‌ಐ ಶವಾಗಾರಕ್ಕೆ ರವಾನಿಸಿದ್ದರು.