bike rider dies  
ಧಾರವಾಡ

bike rider dies ನೀರಿನ ಟ್ಯಾಂಕರ್‌ಗೆ ಬೈಕ್ ಡಿಕ್ಕಿಯಾಗಿ ಸವಾರ ಸಾವು

ಕುಂದಗೋಳ: ರಸ್ತೆಯಲ್ಲಿ ನಿಂತಿದ್ದ ಟ್ರ್ಯಾಕ್ಟರ್ ಟ್ಯಾಂಕರ್‌ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಸವಾರ (bike rider dies) ಮೃತಪಟ್ಟ ಘಟನೆ ಸಮೀಪದ ಸಂಶಿ-ಪಶುಪಾತಿಹಾಳ ರಸ್ತೆಯಲ್ಲಿ ಸಂಭವಿಸಿದೆ.
ಗುಡಗೇರಿಯ ಆನಂದ ಬಸಪ್ಪ ಮುಂಡರಗಿ ಮೃತಪಟ್ಟ ಯುವಕ. ಈತ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಬೈಕ್‌ನಲ್ಲಿ ಹೊರಟಿದ್ದ ವೇಳೆ ರಸ್ತೆ ಮಧ್ಯದಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ಯಾಂಕರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆಸಿ, ತೀವ್ರ ಗಾಯಗೊಂಡಿದ್ದ. ಕುಂದಗೋಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಬಳಿಕ ಹುಬ್ಬಳ್ಳಿ ಕೆಎಂಸಿಆರ್‌ಐಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟಿದ್ದಾನೆ. ಕುಂದಗೋಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲು 108 ಆಂಬುಲೆನ್ಸ್‌ಗೆ ಕರೆ ಮಾಡಿದ್ದರೂ, ಒಂದು ಗಂಟೆ ತಡವಾಗಿ ಬಂದಿದೆ ಘಟನಾ ಸ್ಥಳದಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಿದ್ದರು. ಕಾಂಗ್ರೆಸ್ ಮುಖಂಡ ಬೆಂತೂರ ಶಿವಾನಂದ ಅವರು ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ, ಗಾಯಗೊಂಡಿದ್ದ ಯುವಕನನ್ನು ತಾಲೂಕು ಆಸ್ಪತ್ರೆ ಚಿಕಿತ್ಸೆಗೆ ಕಳುಹಿಸುವ ವ್ಯವಸ್ಥೆ ಮಾಡಿದ್ದರು. ಸೋಮವಾರ ಸಂಜೆ ಯುವಕನ ಸಾವಿನ ಸುದ್ದಿ ತಿಳಿದ ಜನರು, ಆತನ ಸಾವಿಗೆ ಆಂಬುಲೆನ್ಸ್ ಬರುವುದು ವಿಳಂಬವಾಗಿದ್ದೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.